Jagannath Rath Yatra 2024: ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ ನೋಡಿ

Updated on: Jul 07, 2024 | 9:47 PM

Jagannath Rath Yatra 2024: ಒಡಿಶಾದ ಪುರಿಯಲ್ಲಿ ಜಗನ್ನಾಥ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದ್ದಾರೆ. ದೇಶದ ಮೂಲೆ ಮೂಲೆಯಿಂದ ಲಕ್ಷಾಂತರ ಜನರು ಆಗಮಿಸುವ ಮೂಲಕ ಜಗನ್ನಾಥನ ಭಕ್ತಿಗೆ ಪಾತ್ರರಾಗುತ್ತಾರೆ. ಪುರಿಯ 12 ನೇ ಶತಮಾನದ ಜಗನ್ನಾಥ ದೇವಾಲಯದಿಂದ ಸುಮಾರು 2.5 ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಕಡೆಗೆ ಸಾವಿರಾರು ಜನರು ಬೃಹತ್ ರಥಗಳನ್ನು ಎಳೆದಿದ್ದಾರೆ.

ಒಡಿಶಾ, ಜುಲೈ 07: ಪ್ರತಿ ವರ್ಷದಂತೆ ಈ ವರ್ಷವೂ ಪುರಿ ಜಗನ್ನಾಥ ರಥಯಾತ್ರೆಗೆ (Jagannath Rath Yatra) ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಇಂದಿನಿಂದ ಒಂಬತ್ತು ದಿನಗಳವರೆಗೆ ಈ ಯಾತ್ರೆ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಲಕ್ಷಾಂತರ ಜನರು ಆಗಮಿಸುವ ಮೂಲಕ ಜಗನ್ನಾಥನ ಭಕ್ತಿಗೆ ಪಾತ್ರರಾಗುತ್ತಾರೆ. ಭಗವಾನ್ ಜಗನ್ನಾಥ, ಭಗವಾನ್ ಬಲಭದ್ರ ಮತ್ತು ದೇವಿ ಸುಭದ್ರೆಯ ವಿಧ್ಯುಕ್ತವಾದ ‘ಪಹಂಡಿ’ ಆಚರಣೆಯು ಇಂದು ಬೆಳ್ಳಿಗೆ 11 ಗಂಟೆಗೆ ಪ್ರಾರಂಭವಾಗಿದೆ. ಜಗನ್ನಾಥನ ಈ ವಾರ್ಷಿಕ ರಥಯಾತ್ರೆಗೆ ಅಪಾರ ಜನಸ್ತೋಮವೇ ನೆರೆದಿದೆ. ಭಾನುವಾರ ಮಧ್ಯಾಹ್ನ ಪುರಿಯ 12 ನೇ ಶತಮಾನದ ಜಗನ್ನಾಥ ದೇವಾಲಯದಿಂದ ಸುಮಾರು 2.5 ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಕಡೆಗೆ ಸಾವಿರಾರು ಜನರು ಬೃಹತ್ ರಥಗಳನ್ನು ಎಳೆದಿದ್ದಾರೆ. ರಥಯಾತ್ರೆಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೂರು ರಥಗಳಿಗೆ ಪ್ರದಕ್ಷಿಣೆ ಹಾಕಿ ಜಗನ್ನಾಥನಿಗೆ ನಮಸ್ಕರಿಸಿದರು. ಇನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಶುಭಾಶಯ ಕೋರಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More