‘ಆನ್​ಲೈನ್ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದ’: ಜಗ್ಗೇಶ್

Updated on: Nov 04, 2024 | 2:01 PM

ನಿರ್ದೇಶಕ ಗುರುಪ್ರಸಾದ್ ಅವರ ನಿಧನಕ್ಕೆ ಕಾರಣ ಏನಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಸಾಲದ ಸುಳಿಗೆ ಅವರು ಸಿಲುಕಿದ್ದರು ಎಂಬ ಮಾತು ಕೂಡ ಕೇಳಿಬರುತ್ತಿದೆ. ಅವರ ಜೊತೆ ಮೂರು ಸಿನಿಮಾ ಮಾಡಿದ ನಟ ಜಗ್ಗೇಶ್​ ಅವರು ಒಂದು ಆತಂಕಕಾರಿ ವಿಚಾರವನ್ನು ಈಗ ಹಂಚಿಕೊಂಡಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ..

ಡೈರೆಕ್ಟರ್ ಗುರುಪ್ರಸಾದ್ ನಿಧನದ ಬಳಿಕ ಜಗ್ಗೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ನಿರ್ಮಾಪಕರಿಂದ ಈ ವಿಚಾರ ಗೊತ್ತಾಗಿದ್ದು. ಆನ್​ಲೈನ್​ ಗೇಮ್​ನಲ್ಲಿ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದ. ಅನೇಕರ ಬಳಿ ಸಾಲ ಮಾಡಿದ್ದ. ಅಷ್ಟೆಲ್ಲ ಸಾಲ ಆದಾಗ ತೀರಿಸಲು ಆಗಲ್ಲ ಎಂಬುದು ಗೊತ್ತಾದಾಗ ಭಯ ಬರುತ್ತದೆ. ಆ ಭಯವೇ ಆತನಿಗೆ ಆತ್ಮಹತ್ಯೆಯ ಆಲೋಚನೆ ಮೂಡಿಸಿರಬಹುದು’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More