ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ನಿರ್ಮಾಪಕರ ಸಂಘದ ಕಟ್ಟಡ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿದ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ‘ಸಿಎಂ ಸಾಹೇಬರು ಸಿಕ್ಕಾಗ ಸಮಸ್ಯೆ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ತಿನ್ನುತ್ತಿರಬೇಕು’ ಎಂದರು.
ನಿರ್ಮಾಪಕರ ಸಂಘದ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ನಟರಾದ ಶಿವರಾಜ್ ಕುಮಾರ್, ಜಗ್ಗೇಶ್ ಹಾಗೂ ಇನ್ನೂ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮುಂದೆ ಬೇಡಿಕೆಗಳ ಸರಮಾಲೆಯನ್ನೇ ಇಡಲಾಯ್ತು. ಚಿತ್ರರಂಗದ ಸಮಸ್ಯೆಗಳ ಬಗ್ಗೆ ಒಬ್ಬರ ಹಿಂದೊಬ್ಬರು ಹೇಳುತ್ತಲೇ ಇದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್, ಚಿತ್ರರಂಗದ ಕೆಲಸಗಳನ್ನು ಪಟ್ಟು ಹಿಡಿದು ಮಾಡಿಸಬೇಕು, ಸಿದ್ದರಾಮಯ್ಯ ಅವರು ಬಂದಾಗ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ನಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ’ ಎಂದಿದ್ದಾರೆ. ಜಗ್ಗೇಶ್ರ ಹಾಸ್ಯ ಭರಿತ ಮಾತುಗಳಿಗೆ ಸಭೆ ನಕ್ಕು ಹಗುರಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

