AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಜನಿಕಾಂತ್ ಕನ್ನಡ ಡೈಲಾಗ್ ಸೂಪರ್’; ‘ಜೈಲರ್ 2’ ಚಿತ್ರದ ವಿಮರ್ಶೆ ತಿಳಿಸಿದ ಫ್ಯಾನ್ಸ್

‘ರಜನಿಕಾಂತ್ ಕನ್ನಡ ಡೈಲಾಗ್ ಸೂಪರ್’; ‘ಜೈಲರ್ 2’ ಚಿತ್ರದ ವಿಮರ್ಶೆ ತಿಳಿಸಿದ ಫ್ಯಾನ್ಸ್

ರಾಜೇಶ್ ದುಗ್ಗುಮನೆ
|

Updated on: Oct 15, 2026 | 11:25 AM

Share

‘ಜೈಲರ್ 2’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರವನ್ನು ನೋಡಿದ ಫ್ಯಾನ್ಸ್ ಭರ್ಜರಿ ಎಗ್ಸೈಟ್ ಆಗಿದ್ದಾರೆ. ಈ ಸಿನಿಮಾವನ್ನು ನೋಡಿ ಜನರು ಕೊಂಡಾಡಿದ್ದಾರೆ. ಈ ಸಿನಿಮಾ ಹೇಗಿದೆ ಎಂಬುದನ್ನು ಫ್ಯಾನ್ಸ್ ಹೇಳಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ತಂಡದವರು ತಲುಪಿದ್ದಾರೆ.

‘ಜೈಲರ್ 2’ ಸಿನಿಮಾ ಇಂದು (ಅಕ್ಟೋಬರ್ 15) ರಿಲೀಸ್ ಆಗಿದೆ. ಈ ಚಿತ್ರದಲ್ಲಿ ರಜನಿಕಾಂತ್, ಶಿವರಾಜ್​ಕುಮಾರ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಈ ಸಿನಿಮಾ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬೇರೆಯದೇ ಲೆವೆಲ್​​ನಲ್ಲಿದೆ ಎಂದು ಹಾಡಿ ಹೊಗಳಿದ್ದಾರೆ. ‘ಮಾಸ್ ಪ್ರೇಕ್ಷಕರಿಗೆ ಇಷ್ಟ ಆಗುತ್ತದೆ’ ಎಂದು ಕೆಲವರು ಹೇಳಿದ್ದಾರೆ. ‘ರಜನಿ ನಟನೆ ಬೆಸ್ಟ್. ಸಿನಿಮಾ ಗೆಲ್ಲುತ್ತದೆ’ ಎಂದು ಹೊಗಳಿದ್ದಾರೆ. ‘ರಜನಿಕಾಂತ್ ಕನ್ನಡದಲ್ಲಿ ಮಾತನಾಡುತ್ತಾರೆ. ಅದು ಸಖತ್ ಆಗಿದೆ’ ಎಂದು ಹೇಳಿದ್ದಾರೆ. ಇನ್ನು, ‘ಜೈಲರ್ 2’ ಸಿನಿಮಾ ನೋಡಲು ಎಲ್ಲ ಕಡೆಗಳಲ್ಲಿ ನೂಕುನುಗ್ಗಲು ಇತ್ತು ಅನ್ನೋದು ವಿಶೇಷ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲ ಶೋಗಳು ಹೌಸ್​​ಫುಲ್ ಕಾಣುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More