ಬೆಳಗಾವಿಯಲ್ಲಿ ಜೈನಮುನಿ ಹತ್ಯೆ ಪ್ರಕರಣ, ತನಿಖೆ ಚುರುಕುಗೊಳಿಸಿದ ಸಿಐಡಿ ಅಧಿಕಾರಿಗಳು
ಬೆಳಗಾವಿ ಜಿಲ್ಲೆಯಲ್ಲಿ ಜೈನಮುನಿ ಹತ್ಯೆ ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಚಿಕ್ಕೋಡಿಗೆ ಭೇಟಿ ನೀಡಿ ತನಿಖೆ ಚುರುಕುಗೊಳಿಸಿದ್ದಾರೆ.
ಬೆಳಗಾವಿ, (ಜುಲೈ.24): ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ತನಿಖೆಯನ್ನು ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಜೈನಮುನಿ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರವಾದ ಬೆನ್ನಲ್ಲೇ ಅಧಿಕಾರಿಗಳು ಚಿಕ್ಕೋಡಿಗೆ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ. ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಹೆಚ್.ಡಿ.ಕುಲಕರ್ಣಿ ನೇತೃತ್ವದ ಆರು ಅಧಿಕಾರಿಗಳ ತಂಡ, ನಿನ್ನೆ(ಜುಲೈ 23) ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ. ಅಲ್ಲದೇ ಚಿಕ್ಕೋಡಿ ಡಿವೈಎಸ್‌ಪಿ ಬಸವರಾಜ ಯಲಿಗಾರ ಸೇರಿದಂತೆ ಬೆಳಗಾವಿ ಜಿಲ್ಲಾ ಪೊಲೀಸರಿಂದಲೂ ಸಿಐಡಿ ತಂಡ ಮಾಹಿತಿ ಪಡೆದುಕೊಂಡಿದೆ.
Published on: Jul 24, 2023 10:26 AM
Latest Videos