ಜೈಪುರ: ಎಲ್​ಪಿಜಿ- ಸಿಎನ್​ಜಿ ಟ್ರಕ್ ನಡುವೆ ಭೀಕರ ಅಪಘಾತ, ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವದಹನ

|

Updated on: Dec 20, 2024 | 8:49 AM

ರಾಜಸ್ಥಾನದ ರಾಜಧಾನಿ ಜೈಪುರದ ಅಜ್ಮೀರ್ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್‌ ಬಳಿ ಎರಡು ಟ್ರಕ್​ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಣಡಿತ್ತು. ಸದ್ಯ 22 ಅಗ್ನಿಶಾಮಕ ದಳದ ವಾಹನಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಡಲಾಗಿದ್ದರೂ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. 20ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಸಮೀಪದ ಮಾರ್ಗವನ್ನು ಬೇರೆಡೆಗೆ ತಿರುಗಿಸಲಾಗಿದೆ.

ರಾಜಸ್ಥಾನದ ಜೈಪುರದ ಪೆಟ್ರೋಲ್ ಪಂಪ್ ಬಳಿ ಎಲ್‌ಪಿಜಿ ಮತ್ತು ಸಿಎನ್‌ಜಿ ಟ್ರಕ್‌ಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ಅಪಘಾತದ ನಂತರ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಲ್ಲಿ ಸಜೀವ ದಹನದಿಂದಾಗಿ 4 ಜನರು ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ಆಡಳಿತ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. 20ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಸಮೀಪದ ಮಾರ್ಗವನ್ನು ಬೇರೆಡೆಗೆ ತಿರುಗಿಸಲಾಗಿದೆ.

ಈ ಅಪಘಾತದಲ್ಲಿ 12 ರಿಂದ 15 ಜನರು ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಲಾಗುತ್ತಿದೆ. ಅಪಘಾತದ ಕೆಲವು ವೀಡಿಯೋಗಳು ಸಹ ಹೊರಬಿದ್ದಿದ್ದು, ಅದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಸವಾಯಿ ಮಾನ್ಸಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲು ಮಾಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಕೂಡ ಸ್ವಲ್ಪ ಸಮಯದೊಳಗೆ ಅಪಘಾತ ಸ್ಥಳಕ್ಕೆ ತಲುಪಲಿದ್ದಾರೆ.

ಬೆಂಕಿಯು ಹಲವಾರು ಟ್ರಕ್‌ಗಳನ್ನು ಆವರಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ಟ್ರಕ್‌ಗಳ ಸಂಖ್ಯೆ ಸ್ಪಷ್ಟವಾಗಿಲ್ಲ. ಸುಟ್ಟಗಾಯಗಳಿಂದ ಬಳಲುತ್ತಿರುವ ಕೆಲವರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಜೈಪುರದ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಎಂಐ ರಸ್ತೆ ಪ್ರದೇಶದ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಅಂಗಡಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.ರಾತ್ರಿ 8.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಜಲುಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಹವಾ ಸಿಂಗ್ ತಿಳಿಸಿದ್ದಾರೆ. ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 20, 2024 08:48 AM