Jaipur: 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ, ಚಕ್ರದಡಿ ಸಿಲುಕಿ ಬಾಲಕಿ ಸಾವು
ರಾಜಸ್ಥಾನದ ಜೈಪುರದ ಚೋಮು ಪ್ರದೇಶದಲ್ಲಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಚಕ್ರಗಳ ಕೆಳಗೆ ಸಿಲುಕಿ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಖಾಸಗಿ ಶಾಲೆಗೆ ಸೇರಿದ ಬಸ್ ಇದಾಗಿದ್ದು ಘಟನೆ ನಡೆದ ಸಮಯದಲ್ಲಿ ಬಸ್ ಸುಮಾರು 40 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು. ಘಟನೆಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬಸ್ ಸುಮಾರು 60-70 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು. ನಾನು ಬಂದಾಗ, ಗಾಜು ಒಡೆದು 30-40 ಮಕ್ಕಳನ್ನು ಹೊರತೆಗೆದೆ, ಆದರೆ ಬಾಲಕಿಯೊಬ್ಬಳು ಬಸ್ಸಿನ ಕೆಳಗೆ ಸಿಲುಕಿಕೊಂಡು ಸಾವನ್ನಪ್ಪಿದ್ದಾಳೆ . ಬಸ್ಸಿನಲ್ಲಿ ಸುಮಾರು 40-50 ವಿದ್ಯಾರ್ಥಿಗಳಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಘಟನೆಯ ನಂತರ, ಕೋಪಗೊಂಡ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ