Video: ಜೈಪುರದಲ್ಲಿ 10 ವಾಹನಗಳಿಗೆ ಡಿಕ್ಕಿ ಹೊಡೆದ ಡಂಪರ್ ಟ್ರಕ್, 10 ಮಂದಿ ಸಾವು

Updated on: Nov 03, 2025 | 2:58 PM

ರಾಜಸ್ಥಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಟ್ರಕ್ ಹಾಗೂ ಟೆಂಪೋ ಟ್ರಾವೆಲರ್ ಅಪಘಾತ ಮಾಸುವ ಮುನ್ನವೇ ಮತ್ತೊಂದು ಭೀಕರ ಘಟನೆ ಸಂಭವಿಸಿದೆ. ಡಂಪರ್ ಟ್ರಕ್ 10 ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ. ಭಾನುವಾರ ನಡೆದ ಮತ್ತೊಂದು ಅಪಘಾತದಲ್ಲಿ 18 ಮಂದಿ ಪ್ರಾಣ ಕಳೆದುಕೊಂಡಿದ್ದರು.ಪ್ರಾಥಮಿಕ ವರದಿಗಳ ಪ್ರಕಾರ ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಜೈಪುರ, ನವೆಂಬರ್ 03: ರಾಜಸ್ಥಾನದಲ್ಲಿ ಭಾನುವಾರ ರಾತ್ರಿ  ಟ್ರಕ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿ 18 ಮಂದಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನ  ಮತ್ತೊಂದು ಭೀಕರ ಘಟನೆ ವರದಿಯಾಗಿದೆ. ಡಂಪರ್ ಟ್ರಕ್ 10 ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಅಪಘಾತದ ಸಮಯದಲ್ಲಿ ರಸ್ತೆಯಲ್ಲಿ ಸಂಚಾರ ಸಾಮಾನ್ಯವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಆದರೆ ಇದ್ದಕ್ಕಿದ್ದಂತೆ, ಒಂದು ಡಂಪರ್ ಅತಿ ವೇಗದಲ್ಲಿ ಬಂದು ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ, ಡಂಪರ್ ಇತರ ಎರಡು ಕಾರುಗಳು ಮತ್ತು ಒಂದು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 03, 2025 02:49 PM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More