ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ: ಇಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲವೇ?

Updated on: Apr 10, 2026 | 4:29 PM

ಜೈಪುರದಲ್ಲಿ ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವ ಘಟನೆ ನಡೆದು, ವೈರಲ್ ವಿಡಿಯೋ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಚಲಿಸುವ ರಸ್ತೆಯಲ್ಲೇ ಯುವತಿಗೆ ಕಿರುಕುಳ ನೀಡಲಾಗಿದ್ದು, ಇದು ಕೇವಲ ಮಹಿಳೆಯರ ಸುರಕ್ಷತೆಯ ಪ್ರಶ್ನೆಯಷ್ಟೇ ಅಲ್ಲದೆ, ಸಾರ್ವಜನಿಕರ ಮನಸ್ಥಿತಿಯನ್ನೂ ಪ್ರಶ್ನಿಸಿದೆ. ಪೊಲೀಸರು ತನಿಖೆ ಆರಂಭಿಸಿದ್ದರೂ, 'ಪಿಂಕ್ ಸಿಟಿ' ಮಹಿಳೆಯರಿಗೆ ಸುರಕ್ಷಿತವೇ ಎಂಬ ಆತಂಕ ಸೃಷ್ಟಿಯಾಗಿದೆ.

ಜೈಪುರ, ಏ.10: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಅಣಕಿಸುವಂತಹ ಘಟನೆಯೊಂದು ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ. ಚಲಿಸುವ ರಸ್ತೆಯಲ್ಲೇ ಯುವತಿಯೊಬ್ಬರ ಜೊತೆ ದುಷ್ಕರ್ಮಿಗಳು ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ಹರಿದಾಡುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ಬ್ಯುಸಿ ರಸ್ತೆಯಲ್ಲೇ ಯುವತಿಗೆ ಕೆಲವರು ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ಈ ಘಟನೆಯು ಕೇವಲ ಮಹಿಳೆಯರ ಸುರಕ್ಷತೆಯ ಪ್ರಶ್ನೆಯನ್ನಷ್ಟೇ ಅಲ್ಲದೆ, ಅಂತಹ ಸಮಯದಲ್ಲಿ ನೆರವಿಗೆ ಬಾರದ ಜನರ ಮನಸ್ಥಿತಿಯನ್ನೂ ಪ್ರಶ್ನಿಸುವಂತೆ ಮಾಡಿದೆ. ಸಾರ್ವಜನಿಕ ಸ್ಥಳದಲ್ಲಿ ಇಂತಹ ದುಸ್ಸಾಹಸ ನಡೆಯುತ್ತಿದ್ದರೂ ಕಾನೂನು ಸುವ್ಯವಸ್ಥೆ ಎಲ್ಲಿಗೆ ತಲುಪಿದೆ ಎಂಬುದು ಜನಸಾಮಾನ್ಯರ ಆತಂಕಕ್ಕೆ ಕಾರಣವಾಗಿದೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಜೈಪುರದಂತಹ ಪ್ರಮುಖ ನಗರದಲ್ಲಿ ಇಂತಹ ಘಟನೆಗಳು ಮಹಿಳೆಯರಲ್ಲಿ ಭಯದ ವಾತಾವರಣ ನಿರ್ಮಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು “ಪಿಂಕ್ ಸಿಟಿ ಈಗ ಮಹಿಳೆಯರಿಗೆ ಸುರಕ್ಷಿತವಲ್ಲವೇ?” ಎಂದು ಪ್ರಶ್ನಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

 

 

Published on: Apr 10, 2026 04:09 PM
Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More