ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್​ಗೆ ಚುನಾವಣೆಯಲ್ಲಿ ಗೆಲುವು

Updated on: Jan 16, 2026 | 3:10 PM

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ನಡೆಸಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು.

ಮುಂಬೈ, ಜನವರಿ 16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ನಡೆಸಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು.

ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಯಿತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 13 ರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಶ್ರೀಕಾಂತ್ ಪಂಗಾರ್ಕರ್ ಅವರು ನೃತ್ಯ ಮಾಡುತ್ತಾ ಮತ್ತು ಡ್ರಮ್ಸ್ ಬಾರಿಸುತ್ತಾ ಹೂವುಗಳನ್ನು ಎಸೆಯುವ ಮೂಲಕ ಸಂಭ್ರಮಿಸಿದ್ದು ಪಿಟಿಐ ಈ ವಿಡಿಯೋ ಹಂಚಿಕೊಂಡಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ವಾರ್ಡ್‌ನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಜನವರಿ 15 ರಂದು ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳು ನಡೆದಿದ್ದವು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More