AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ ಕುರಿತು ಕಳವಳ ವ್ಯಕ್ತಪಡಿಸಿದ ಸಿಎಂ ಒಮರ್ ಅಬ್ದುಲ್ಲಾ

ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ ಕುರಿತು ಕಳವಳ ವ್ಯಕ್ತಪಡಿಸಿದ ಸಿಎಂ ಒಮರ್ ಅಬ್ದುಲ್ಲಾ

ಸುಷ್ಮಾ ಚಕ್ರೆ
|

Updated on: Aug 24, 2026 | 9:07 PM

Share

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಬಂದಿರುವ ಬೆದರಿಕೆಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಎಚ್ಚರಿಕೆಗಳ ಮೂಲ ಯಾವುದು ಎಂದು ತನಿಖೆ ಮಾಡುವಂತೆ ಮತ್ತು ಸಮುದಾಯದ ಸುರಕ್ಷತೆಯನ್ನು ಖಚಿತಪಡಿಸುವಂತೆ ಅವರು ಪೊಲೀಸ್ ಹಾಗೂ ಗುಪ್ತಚರ ಸಂಸ್ಥೆಗಳನ್ನು ಆಗ್ರಹಿಸಿದ್ದಾರೆ. ಸುಮಾರು 2 ವರ್ಷಗಳ ಹಿಂದೆ ಕಾಶ್ಮೀರಿ ಪಂಡಿತ್ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ ಘಟನೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಆ ಸಮಯದಲ್ಲಿ ಸರ್ಕಾರವು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು ಎಂದು ಸಿಎಂ ಹೇಳಿದ್ದಾರೆ.

ಶ್ರೀನಗರ, ಆಗಸ್ಟ್ 24: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಬಂದಿರುವ ಬೆದರಿಕೆಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಎಚ್ಚರಿಕೆಗಳ ಮೂಲ ಯಾವುದು ಎಂದು ತನಿಖೆ ಮಾಡುವಂತೆ ಮತ್ತು ಸಮುದಾಯದ ಸುರಕ್ಷತೆಯನ್ನು ಖಚಿತಪಡಿಸುವಂತೆ ಅವರು ಪೊಲೀಸ್ ಹಾಗೂ ಗುಪ್ತಚರ ಸಂಸ್ಥೆಗಳನ್ನು ಆಗ್ರಹಿಸಿದ್ದಾರೆ. ಸುಮಾರು 2 ವರ್ಷಗಳ ಹಿಂದೆ ಕಾಶ್ಮೀರಿ ಪಂಡಿತ್ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ ಘಟನೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಆ ಸಮಯದಲ್ಲಿ ಸರ್ಕಾರವು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಯಿತು ಎಂದು ಸಿಎಂ ಹೇಳಿದ್ದಾರೆ.

ಕಾಶ್ಮೀರಿ ಪಂಡಿತರ, ಅದರಲ್ಲೂ ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿರುವ ಅಥವಾ ಅಲ್ಲಿ ಕೆಲಸ ಮುಂದುವರಿಸುತ್ತಿರುವವರ ಭದ್ರತೆಯ ಕುರಿತು ಕಳವಳ ವ್ಯಕ್ತವಾಗಿರುವ ಬೆನ್ನಲ್ಲೇ ಅವರ ಈ ಹೇಳಿಕೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More