ಜಮ್ಮು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಜಮ್ಮು ಮತ್ತು ಕಾಶ್ಮೀರದ ವಿಶ್ವಪ್ರಸಿದ್ಧ ಪ್ರವಾಸಿ ತಾಣವಾದ ಗುಲ್ಮಾರ್ಗ್‌ನ ಅಫರ್ವಾತ್ ಶಿಖರದಲ್ಲಿ ಇಂದು ಮೊದಲ ಹಿಮಪಾತವಾಗಿದೆ. ಸಾಲು ಸಾಲು ಪರ್ವತಗಳು ಹೊಸದಾಗಿ ಬಿದ್ದ ಹಿಮದ ಮಂಜಿನ ಹೊದಿಕೆಯಿಂದ ಕಂಗೊಳಿಸುತ್ತಿದ್ದು, ಕಣಿವೆಯ ಸೌಂದರ್ಯಕ್ಕೆ ಮತ್ತಷ್ಟು ಕಳೆ ತಂದಿದೆ. ಸಮುದ್ರ ಮಟ್ಟದಿಂದ ಸಾವಿರಾರು ಅಡಿ ಎತ್ತರದಲ್ಲಿರುವ ಅಫರ್ವಾತ್ ಪರ್ವತ ಶ್ರೇಣಿಗಳಲ್ಲಿ ಇಂದು ದಿಢೀರ್ ವಾತಾವರಣ ಬದಲಾಗಿ ಹಿಮಪಾತ ಆರಂಭವಾಗಿದೆ. ಪ್ರಸಿದ್ಧ 'ಗುಲ್ಮಾರ್ಗ್ ಗೊಂಡೋಲಾ' ಕೇಬಲ್ ಕಾರ್ ಸಂಪರ್ಕ ಕಲ್ಪಿಸುವ ಈ ಶಿಖರದಲ್ಲಿ ಹಿಮ ಬೀಳುತ್ತಿರುವುದು ಪ್ರವಾಸಿಗರನ್ನು ಆಕರ್ಷಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24ರಿಂದ 48 ಗಂಟೆಗಳ ಕಾಲ ಕಾಶ್ಮೀರ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ಲಘು ಹಿಮಪಾತ ಮತ್ತು ತಗ್ಗು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಶ್ರೀನಗರ, ಸೆಪ್ಟೆಂಬರ್ 22: ಜಮ್ಮು ಮತ್ತು ಕಾಶ್ಮೀರದ ವಿಶ್ವಪ್ರಸಿದ್ಧ ಪ್ರವಾಸಿ ತಾಣವಾದ ಗುಲ್ಮಾರ್ಗ್‌ನ ಅಫರ್ವಾತ್ ಶಿಖರದಲ್ಲಿ ಇಂದು ಮೊದಲ ಹಿಮಪಾತವಾಗಿದೆ. ಸಾಲು ಸಾಲು ಪರ್ವತಗಳು ಹೊಸದಾಗಿ ಬಿದ್ದ ಹಿಮದ ಮಂಜಿನ ಹೊದಿಕೆಯಿಂದ ಕಂಗೊಳಿಸುತ್ತಿದ್ದು, ಕಣಿವೆಯ ಸೌಂದರ್ಯಕ್ಕೆ ಮತ್ತಷ್ಟು ಕಳೆ ತಂದಿದೆ. ಸಮುದ್ರ ಮಟ್ಟದಿಂದ ಸಾವಿರಾರು ಅಡಿ ಎತ್ತರದಲ್ಲಿರುವ ಅಫರ್ವಾತ್ ಪರ್ವತ ಶ್ರೇಣಿಗಳಲ್ಲಿ ಇಂದು ದಿಢೀರ್ ವಾತಾವರಣ ಬದಲಾಗಿ ಹಿಮಪಾತ ಆರಂಭವಾಗಿದೆ. ಪ್ರಸಿದ್ಧ ‘ಗುಲ್ಮಾರ್ಗ್ ಗೊಂಡೋಲಾ’ ಕೇಬಲ್ ಕಾರ್ ಸಂಪರ್ಕ ಕಲ್ಪಿಸುವ ಈ ಶಿಖರದಲ್ಲಿ ಹಿಮ ಬೀಳುತ್ತಿರುವುದು ಪ್ರವಾಸಿಗರನ್ನು ಆಕರ್ಷಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24ರಿಂದ 48 ಗಂಟೆಗಳ ಕಾಲ ಕಾಶ್ಮೀರ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ಲಘು ಹಿಮಪಾತ ಮತ್ತು ತಗ್ಗು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

