ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಜಮ್ಮುವಿನ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್ ಅನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಗೆ ಸಂಪರ್ಕಿಸುವ ಮೊಘಲ್ ರಸ್ತೆಯನ್ನು ತೆರೆಲಾಗಿದೆ. ಆದರೆ, ಭೂಕುಸಿತದಿಂದ ಜಮ್ಮು-ಶ್ರೀನಗರ ಹೆದ್ದಾರಿಯನ್ನು ಮುಚ್ಚಲಾಗಿದೆ. ಭಾನುವಾರ ಭಾರೀ ಮಳೆ ಮತ್ತು ಮೋಡ ಕವಿದ ನಂತರ, ರಾಂಬನ್ ಜಿಲ್ಲೆಯಲ್ಲಿ ಹಠಾತ್ ಪ್ರವಾಹ, ಭೂಕುಸಿತ ಮತ್ತು ಮಣ್ಣು ಕುಸಿತ ಸಂಭವಿಸಿದ ನಂತರ, ಕಾಶ್ಮೀರವನ್ನು ದೇಶದ ಉಳಿದ ಭಾಗಗಳಿಗೆ ಸಂಪರ್ಕಿಸುವ ಏಕೈಕ ಸರ್ವಋತು ರಸ್ತೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಿಲುಕಿಕೊಂಡವು.
ಶ್ರೀನಗರ, ಏಪ್ರಿಲ್ 21: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ (Ramban Landslide) ಭೂಕುಸಿತದಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಸಂಪರ್ಕಿಸುವ ಮೊಘಲ್ ರಸ್ತೆಯನ್ನು ಇಂದು ಮತ್ತೆ ತೆರೆಯಲಾಯಿತು. ಜಮ್ಮುವಿನ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್ ಅನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಗೆ ಸಂಪರ್ಕಿಸುವ ಮೊಘಲ್ ರಸ್ತೆ. ಪ್ರತಿಕೂಲ ಹವಾಮಾನ ಮತ್ತು ಹೊಸ ಹಿಮಪಾತದಿಂದಾಗಿ 250 ಕಿ.ಮೀ ಉದ್ದದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಅಡಚಣೆಯಿಂದ ಉಂಟಾದ ದಟ್ಟಣೆಯನ್ನು ತೆರವುಗೊಳಿಸಲು ಮೊಘಲ್ ರಸ್ತೆಯನ್ನು ಮತ್ತೆ ತೆರೆಯಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ