Video: ಪಾಕ್​ಗೆ ಆಘಾತ: ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ

ಭಾರತದ ಕ್ರಮದಿಂದಾಗಿ ಜಮ್ಮು ಜಿಲ್ಲೆಯ ಅಖ್ನೂರ್​ ಬಳಿ ಚೆನಾಬ್ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ನೀರಿಲ್ಲದೆ ಚೆನಾಬ್ ನದಿ ಖಾಲಿ ಹೊಡೆಯುತ್ತಿದೆ. ಕಾಶ್ಮೀರದ ಅಖ್ನೂರ್​ ಬಳಿ ಇರುವ ಈ ಚೆನಾಬ್ ನದಿ ಖಾಲಿ ಖಾಲಿಯಾಗಿದ್ದು, ಸ್ಥಳೀಯರು ಓಡಾಡುತ್ತಿರುವುದನ್ನು ಕಾಣಬಹುದು. ಚೆನಾಬ್ ನದಿ ಹಿಮಾಚಲ ಪ್ರದೇಶದಿಂದ ಹುಟ್ಟಿ ಜಮ್ಮು ಪ್ರದೇಶದ ಮೂಲಕ ಹಾದುಹೋಗುತ್ತದೆ.

ಇದಾದ ನಂತರ ಅದು ಪಾಕಿಸ್ತಾನಕ್ಕೆ ಹೋಗುತ್ತದೆ. ಭಾರತದಲ್ಲಿ ಇದರ ಉದ್ದ ಸುಮಾರು 504 ಕಿಲೋಮೀಟರ್,  ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ, ಈ ನದಿಯ ನೀರನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತದೆ. ಆದರೆ ಈಗ ಒಪ್ಪಂದ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀರು ಬಿಡುತ್ತಿಲ್ಲ. ಹೀಗಾಗಿ ನದಿ ಪಾತ್ರ ಬರಿದಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us