ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ
ರಾಷ್ಟ್ರ ಗೀತೆ ಜನಗಣಮನ ಗೀತೆಯ ಕುರಿತಾಗಿ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶಕ್ಕೆ ಕಾರಣವಾಗಿದ್ದಾರೆ. ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿಯ ಸ್ವಾಗತಕ್ಕೆ ಜನ ಗಣ ಮನ ಗೀತೆಯನ್ನು ಹಾಗೂ ರಾಷ್ಟ್ರೀಯ ಗೀತೆಯಾಗಿ ವಂದೇ ಮಾತರಂ ಗೀತೆಯನ್ನು ರಚಿಸಿದ್ದರು ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ನವೆಂಬರ್ 6: ಭಾರತದ ರಾಷ್ಟ್ರಗೀತೆ (National Anthem) ‘ಜನ ಗಣ ಮನ’ ಬ್ರಿಟಿಷ್ ಅಧಿಕಾರಿಯ ಸ್ವಾಗತಕ್ಕೆ ರಚನೆಯಾದ ಗೀತೆಯಾಗಿತ್ತು. ನಿಜವಾಗಿಯೂ ಹೇಳಬೇಕೆಂದರೆ ‘ವಂದೇ ಮಾತರಂ’ (Vande Mataram) ರಾಷ್ಟ್ರಗೀತೆಯಾಗಬೇಕಿತ್ತು ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಕರ್ನಾಟಕದ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ರಾಮಲಿಂಗಾರೆಡ್ಡಿ, ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಖಂಡಿಸಿದ್ದಾರೆ. ಬಿಜೆಪಿ ನಾಯಕರು ಇತಿಹಾಸ ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕಾಗೇರಿ ಅವರು ಇತಿಹಾಸ ಓದಿದ ನಂತರ ಮಾತನಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
