ಮತ್ತೆ ಒಂದಾದ ಜೋಡೆತ್ತು: 40 ವರ್ಷಗಳ ಸ್ನೇಹ ಮುಂದುವರಿಕೆ!
ಗಂಗಾವತಿಯ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhan Reddy), ಮಾಜಿ ಸಚಿವ ಶ್ರೀರಾಮುಲು (Sriramulu) ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ರಾಜಕಾರಣದಿಂದ ಹಿಡಿದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಒಂದು ಕಾಲದಲ್ಲಿ ಸದ್ದು ಮಾಡಿದ್ದ ರೆಡ್ಡಿ-ರಾಮುಲು ಈ ಜೋಡಿ ಇತ್ತೀಚೆಗಷ್ಟೇ ವೈಯಕ್ತಿಕ ಭಿನ್ನಾಭಿಪ್ರಾಯಗಳು ಕೆಲವು ಆಸ್ತಿ ಜಗಳಗಳಿಂದಾಗಿ ದೂರವಾಗಿದ್ದರು.
ಬಳ್ಳಾರಿ, (ಜುಲೈ 27): ಗಂಗಾವತಿಯ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhan Reddy), ಮಾಜಿ ಸಚಿವ ಶ್ರೀರಾಮುಲು (Sriramulu) ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ರಾಜಕಾರಣದಿಂದ ಹಿಡಿದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಒಂದು ಕಾಲದಲ್ಲಿ ಸದ್ದು ಮಾಡಿದ್ದ ರೆಡ್ಡಿ-ರಾಮುಲು ಈ ಜೋಡಿ ಇತ್ತೀಚೆಗಷ್ಟೇ ವೈಯಕ್ತಿಕ ಭಿನ್ನಾಭಿಪ್ರಾಯಗಳು ಕೆಲವು ಆಸ್ತಿ ಜಗಳಗಳಿಂದಾಗಿ ದೂರವಾಗಿದ್ದರು. ಬಿಜೆಪಿ ಹಿರಿಯ ನಾಯಕರು ಇವರನ್ನು ಒಂದು ಮಾಡಲು ನೋಡಿದ್ದರು. ಆದರೆ, ನಾವು ಒಂದಾಗುವ ಮಾತೇ ಇಲ್ಲ. ಪರಸ್ಪರ ಮುಖವನ್ನು ನೋಡುವುದಿಲ್ಲ ಎನ್ನುವ ಶಪಥ ತೊಟ್ಟಿದ್ದರು. ಆದರೆ, ದಿಢೀರ್ ಈಗ ಮನಸು ಬದಲಾಯಿಸಿದ್ದಾರೆ. ನಮ್ಮ ನಡುವೆ ಯಾವುದೇ ಜಗಳಗಳಿಲ್ಲ. ನಾವು ಚೆನ್ನಾಗಿದ್ದೇವೆ ಎಂದಿದ್ದು, ಇದೀಗ ಬಳ್ಳಾರಿಯಲ್ಲಿ ಒಟ್ಟಾಗಿ ಜೂನಿಯರ್ ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾರೆ.
ಜನಾರ್ದನರೆಡ್ಡಿ ಪುತ್ರ ಕಿರೀಟಿ ಅಭಿನಯದ ಜೂನಿಯರ್ ಸಿನಿಮಾವನ್ನು ಬಳ್ಳಾರಿಯ ನಟರಾಜ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದರು.ಇಬ್ಬರೂ ವೈಯಕ್ತಿಕ ಪರಸ್ಪರ ಕೆಸರೆರಚಾಟದ ಮೂಲಕ ಹಾವು ಮುಂಗುಸಿಯಂತಾಗಿದ್ರು. ಒಬ್ಬರ ಮೇಲೊಬ್ಬರು ಆರೋಪ- ಪ್ರತ್ಯಾರೋಪ ಮಾಡುವ ಮೂಲಕ 40 ವರ್ಷಗಳ ಸ್ನೇಹಕ್ಕೆ ಅಂತ್ಯಹಾಡಿದ್ರು. ಆದ್ರೆ, ಇದೀಗ ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ.

