ರಾಜ್ಯದಲ್ಲಿ ಯಾರಿಗೂ ರಕ್ಷಣೆ ಇಲ್ಲ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆರೋಪ

Edited By:

Updated on: Oct 15, 2025 | 6:09 PM

ರಾಜ್ಯ ಸರ್ಕಾರದ ವಿರುದ್ಧ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಯಾದಗಿರಿಯಲ್ಲಿ ASI ಅವರನ್ನೇ ಅಪಹರಣ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸರಿಂದ ಜನರಿಗೆ ರಕ್ಷಣೆ ಇಲ್ಲ, ಪೊಲೀಸರಿಗೂ ರಕ್ಷಣೆ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ. ಶಾಸಕರಿಗೆ ಅನುದಾನ ತಾರತಮ್ಯ ವಿಚಾರವಾಗಿಯೂ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಕೊಪ್ಪಳ, ಅಕ್ಟೋಬರ್​ 15: ಯಾದಗಿರಿಯಲ್ಲಿ ASI ಅವರನ್ನೇ ಅಪಹರಣ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸರಿಂದ ಜನರಿಗೆ ರಕ್ಷಣೆ ಇಲ್ಲ, ಪೊಲೀಸರಿಗೂ ರಕ್ಷಣೆ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ಕೊಪ್ಪಳದಲ್ಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆರೋಪಿಸಿದ್ದಾರೆ. ಶಾಸಕರಿಗೆ ಅನುದಾನ ತಾರತಮ್ಯ ವಿಚಾರವಾಗಿಯೂ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಮುಖ್ಯಮಂತ್ರಿ ಆದವರು ಒಬ್ಬರಿಗೊಂದು ಒಬ್ಬರಿಗೊಂದು ಮಾಡಬಾರದು. ಈಗ ನಾನೇ ಸಾಕ್ಷಿ, ಗಂಗಾವತಿ ಕ್ಷೇತ್ರಕ್ಕೆ 25 ಕೋಟಿ ಕೊಟ್ಟಿದ್ದಾರೆ. ಪಕ್ಕದ ಕ್ಷೇತ್ರದ ಕಾಂಗ್ರೆಸ್​ ಶಾಸಕರಿಗೆ 50 ಕೋಟಿ ಕೊಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 15, 2025 06:07 PM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More