ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ?
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಡೂರು ಕ್ಲಸ್ಟರ್ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಟಪಾಲ್ ಗಣೇಶ್ ಅವರು ಸರ್ಕಾರಕ್ಕೆ ಪತ್ರ ಬರೆದು 884 ಕೋಟಿ ವಸೂಲಿಗೆ ಒತ್ತಾಯಿಸಿದ್ದಾರೆ. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದ್ದು, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಗಣಿಗಾರಿಕೆ ಬಗ್ಗೆ ಮಾಹಿತಿ ನೀಡಲು ಸೂಚಿಸಲಾಗಿದೆ.
ಬಳ್ಳಾರಿ, ಫೆಬ್ರವರಿ 27: ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟ ಮಾಡಿದ್ದಾರೆ. ಹೀಗಾಗಿ ಆ ಹಣವನ್ನು ಅವರಿಂದ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ ರೆಡ್ಡಿ ನಡೆಸಿರುವ ಗಣಿಗಾರಿಕೆ ಕುರಿತು ವರದಿ ನೀಡಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 27, 2026 03:27 PM
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
