ರಾಜ್ಯ ಸರ್ಕಾರದ ಆದೇಶಕ್ಕೆ ಸೆಡ್ಡು: ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆ ಪೂರ್ತಿಯಾಗಿ ಹಾಡಿಸಿದ ಶಾಸಕ ಜನಾರ್ದನ ರೆಡ್ಡಿ
ವಂದೇ ಮಾತರಂ ಗೀತೆಯ ಕೇವಲ ಎರಡು ಚರಣಗಳನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ತಾಲೂಕು ಮಟ್ಟದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಶಾಸಕ ಜನಾರ್ದನ ರೆಡ್ಡಿ ಉಲ್ಲಂಘಿಸಿದ್ದಾರೆ. ರೆಡ್ಡಿ ಸೂಚನೆಯಂತೆ ಅಧಿಕಾರಿಗಳು ಪೂರ್ಣ ಗೀತೆಯನ್ನು ಹಾಡಿದ್ದು, ಸರ್ಕಾರದ ಆದೇಶ ಪಾಲಿಸಬೇಕೇ ಅಥವಾ ಶಾಸಕರ ಮಾತನ್ನು ಕೇಳಬೇಕೇ ಎಂಬ ಗೊಂದಲಕ್ಕೆ ಸಿಲುಕಿದ್ದರು. ಈ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ, ಸೆಪ್ಟೆಂಬರ್ 13: ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನರೆಡ್ಡಿ ರಾಜ್ಯ ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದಿದ್ದು ತಾಲೂಕು ಮಟ್ಟದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆ ಸಂಪೂರ್ಣವಾಗಿ ಹಾಡಿಸಿದ್ದಾರೆ. ಕೇವಲ ಎರಡು ಚರಣ ಮಾತ್ರ ಹಾಡಬೇಕು ಎಂಬ ರಾಜ್ಯ ಸರ್ಕಾರದ ಆದೇಶವಿದ್ದರೂ ಸಂಪೂರ್ಣ ವಂದೇ ಮಾತರಂ ಗೀತೆಯನ್ನು ಹಾಡಲಾಗಿದೆ. ಕಾರ್ಯಕ್ರಮದಲ್ಲಿ ಮೊದಲು ಎರಡು ಚರಣವನ್ನು ಮಾತ್ರ ಹಾಡಲಾಗಿತ್ತು. ಆದರೆ ವೇದಿಕೆಯಲ್ಲಿದ್ದ ಶಾಸಕ ಜನಾರ್ದನರೆಡ್ಡಿ ಸೂಚನೆ ಬಳಿಕ ಸಂಪೂರ್ಣವಾಗಿ ವಂದೇ ಮಾತರಂ ಗೀತೆ ಮೊಳಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಆದೇಶ ಪಾಲಿಸಬೇಕೋ ಅಥವಾ ಶಾಸಕರ ಮಾತು ಕೇಳಬೇಕೋ ಎಂಬ ಗೊಂದಲಕ್ಕೆ ಪ್ರಭಾರಿ ಶಿಕ್ಷಣಾಧಿಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಿಲುಕಿದ ಪ್ರಸಂಗಕ್ಕೆ ಕಾರ್ಯಕ್ರಮ ಸಾಕ್ಷಿಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

