Siddaramaiah: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಗೆ ಸ್ಥಳದಲ್ಲೇ 1 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Siddaramaiah: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಗೆ ಸ್ಥಳದಲ್ಲೇ 1 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

TV9 Web
| Updated By: Rakesh Nayak Manchi

Updated on:Nov 27, 2023 | 3:08 PM

ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಸಾವಿರಾರು ಜನ ಸಿಎಂ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಕೆಲವರಿಗೆ ಸಿಎಂ ಅವರು ಕೂತಲ್ಲೇ ಪರಿಹಾರ ನೀಡಿ ಸ್ಪಂದಿಸುತ್ತಿದ್ದಾರೆ.

ಬೆಂಗಳೂರು, ನ.27: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ (Janata Darshan) ಕಾರ್ಯಕ್ರಮ ನಡೆಸಿದ್ದಾರೆ. ಅದರಂತೆ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಸವರಾಜ್ ಎಂಬವರಿಗೆ ಸಿಎಂ ಪರಿಹಾರ ನಿಧಿಯಿಂದ 1 ಲಕ್ಷ ರೂಪಾಯಿ ನೀಡಲು ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Nov 27, 2023 02:41 PM