AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಆರಂಭದಲ್ಲೇ ತಿರುಪತಿಗೆ ಬಂದು ಪೂಜೆ ಸಲ್ಲಿಸಿದ ಜಾನ್ವಿ ಕಪೂರ್​

ಹೊಸ ವರ್ಷದ ಆರಂಭದಲ್ಲೇ ತಿರುಪತಿಗೆ ಬಂದು ಪೂಜೆ ಸಲ್ಲಿಸಿದ ಜಾನ್ವಿ ಕಪೂರ್​

ಮದನ್​ ಕುಮಾರ್​
| Edited By: |

Updated on:Jan 22, 2024 | 11:43 AM

Share

ವೆಂಕಟೇಶ್ವರನಿಗೆ ಪೂಜೆ ಸಲ್ಲಿಸುವ ಮೂಲಕ ಜಾನ್ವಿ ಕಪೂರ್​ ಅವರು ಸುದ್ದಿ ಆಗಿದ್ದಾರೆ. ತಿರುಮಲ ದೇವಾಲಯದ ಆವರಣದಲ್ಲಿ ಜಾನ್ವಿ ಕಪೂರ್​ ಅವರು ಕಾಣಿಸಿಕೊಂಡ ವಿಡಿಯೋ ವೈರಲ್​ ಆಗಿದೆ. ಬಾಲಿವುಡ್​ನಲ್ಲಿ ಫೇಮಸ್​ ಆಗಿರುವ ಅವರು ಈಗ ಟಾಲಿವುಡ್​ಗೂ ಎಂಟ್ರಿ ನೀಡುತ್ತಿದ್ದಾರೆ.

ನಟಿ ಜಾನ್ವಿ ಕಪೂರ್​ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಸದಾ ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವ ಅವರು ಈಗ ಅಚ್ಚುಕಟ್ಟಾಗಿ ಸೀರೆ ಧರಿಸಿ ದೇವರ ಸನ್ನಿಧಿಗೆ ಬಂದಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸುವ ಮೂಲಕ ಅವರು ಸುದ್ದಿ ಆಗಿದ್ದಾರೆ. ದೇವಾಲಯದ (Tirumala Temple) ಆವರಣದಲ್ಲಿ ಜಾನ್ವಿ ಕಪೂರ್​ ಅವರು ಕಾಣಿಸಿಕೊಂಡ ವಿಡಿಯೋ ವೈರಲ್​ ಆಗಿದೆ. ಬಾಲಿವುಡ್​ನಲ್ಲಿ ಫೇಮಸ್​ ಆಗಿರುವ ಜಾನ್ವಿ ಕಪೂರ್​ (Janhvi Kapoor) ಅವರು ‘ದೇವರ’ ಸಿನಿಮಾ ಮೂಲಕ ಟಾಲಿವುಡ್​ಗೂ ಎಂಟ್ರಿ ನೀಡುತ್ತಿದ್ದಾರೆ. ಆ ಸಿನಿಮಾದ ಫಸ್ಟ್​ ಗ್ಲಿಂಪ್ಸ್​ ಜನವರಿ 8ರಂದು ಬಿಡುಗಡೆ ಆಗಲಿದೆ. ‘ದೇವರ’ ಚಿತ್ರದಲ್ಲಿ ಜೂನಿಯರ್​ ಎನ್​ಟಿಆರ್​ ಜೊತೆ ಜಾನ್ವಿ ಕಪೂರ್​ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ..

Published on: Jan 05, 2024 01:12 PM
Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More