ದೆಹಲಿಯ ಜಂತರ್ ಮಂತರ್‌ನಲ್ಲಿ ಎಎಪಿ ಬೃಹತ್ ಪ್ರತಿಭಟನೆ: ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್, ಆತಿಶಿ ಸೇರಿ 500ಕ್ಕೂ ಹೆಚ್ಚು ಮಂದಿ ವಶಕ್ಕೆ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ ಆಯುಕ್ತರ ಕಾರ್ಯವೈಖರಿಯನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಆಮ್ ಆದ್ಮಿ ಪಾರ್ಟಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶ ತೀವ್ರ ಉದ್ವಿಗ್ನತೆಗೆ ಕಾರಣವಾಯಿತು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ದೆಹಲಿ ಪೊಲೀಸರು ಕ್ರಮ ಕೈಗೊಂಡು, ಆಪ್‌ನ ಹಿರಿಯ ನಾಯಕರಾದ ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್, ಆತಿಶಿ, ಸಂಜೀವ್ ಝಾ, ಅನುರಾಗ್ ಧಾಂಡಾ ಸೇರಿದಂತೆ 500ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಇಂಡಿಯಾ ಬ್ಲಾಕ್ ಕರೆ ನೀಡಿದ್ದ 'ಪ್ರಜಾಪ್ರಭುತ್ವ ಉಳಿಸಿ' ಹೋರಾಟದ ಭಾಗವಾಗಿ ಈ ಧರಣಿ ಆಯೋಜಿಸಲಾಗಿತ್ತು.
ನವದೆಹಲಿ ಅಕ್ಟೋಬರ್ 02: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ ಆಯುಕ್ತರ ಕಾರ್ಯವೈಖರಿಯನ್ನು ವಿರೋಧಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಆಮ್ ಆದ್ಮಿ ಪಾರ್ಟಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶ ತೀವ್ರ ಉದ್ವಿಗ್ನತೆಗೆ ಕಾರಣವಾಯಿತು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ದೆಹಲಿ ಪೊಲೀಸರು ಕ್ರಮ ಕೈಗೊಂಡು, ಆಪ್‌ನ ಹಿರಿಯ ನಾಯಕರಾದ ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್, ಆತಿಶಿ, ಸಂಜೀವ್ ಝಾ, ಅನುರಾಗ್ ಧಾಂಡಾ ಸೇರಿದಂತೆ 500ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಇಂಡಿಯಾ ಬ್ಲಾಕ್ ಕರೆ ನೀಡಿದ್ದ ‘ಪ್ರಜಾಪ್ರಭುತ್ವ ಉಳಿಸಿ’ ಹೋರಾಟದ ಭಾಗವಾಗಿ ಈ ಧರಣಿ ಆಯೋಜಿಸಲಾಗಿತ್ತು.
ಪ್ರತಿಭಟನೆಯಲ್ಲಿ ನಡೆದಿದ್ದೇನು?
ಜಂತರ್ ಮಂತರ್‌ನಲ್ಲಿ ಜಮಾವಣೆ: ಶುಕ್ರವಾರ ಬೆಳಗ್ಗೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಆಪ್ ನಾಯಕರು ಮತ್ತು ಕಾರ್ಯಕರ್ತರು ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ಚುನಾವಣಾ ಆಯೋಗದ ಕಚೇರಿಯತ್ತ ಮೆರವಣಿಗೆ ಸಾಗಲು ಯತ್ನಿಸಿದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ತಳ್ಳಾಟ-ನೂಕಾಟ ನಡೆಯಿತು. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಪೊಲೀಸರು ಸಂಸದ ಸಂಜಯ್ ಸಿಂಗ್, ನಾಯಕಿ ಆತಿಶಿ, ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಮುಂಚೂಣಿ ಮುಖಂಡರನ್ನು ಬಸ್‌ಗಳಲ್ಲಿ ತುಂಬಿ ಸಮೀಪದ ಪೊಲೀಸ್ ಠಾಣೆಗಳಿಗೆ ರವಾನಿಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ