ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು, ಮನೆಗಳಿಗೆ ನೀರು ನುಗ್ಗಿ ಅವಾಂತರ
Mangaluru Rains and Flood: 2018 ರಲ್ಲಿ ಮಂಗಳೂರಿನ ಜಪ್ಪಿನಮೊಗರಿನಲ್ಲಿ ಭಾರಿ ಪ್ರವಾಹ ಸೃಷ್ಟಿಯಾಗಿತ್ತು. ಇದೀಗ ಮತ್ತೆ ಅಂಥದ್ದೇ ಪರಿಸ್ಥಿತಿ ಸೃಷ್ಟಿಯಾಗಿದೆ. ಸುಮಾರು ಏಳು ವರ್ಷಗಳ ಬಳಿಕ ಮತ್ತೆ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿಯಿಂದ ಜನ ಕಂಗಾಲಾಗಿದ್ದಾರೆ. ಜಪ್ಪಿನಮೊಗರು ಪ್ರವಾಹ ಪರಿಸ್ಥಿತಿಯ ವಿಡಿಯೋ ಇಲ್ಲಿದೆ.
ಮಂಗಳೂರು, ಮೇ 30: ಭಾರಿ ಮಳೆಯ ಕಾರಣ ಪ್ರವಾಹ ರಿಸ್ಥಿತಿ ಸೃಷ್ಟಿಯಾಗಿದ್ದು, ಮಂಗಳೂರಿನ ಜಪ್ಪಿನಮೊಗರು ಪ್ರದೇಶ ದ್ವೀಪದಂತಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಜಪ್ಪಿನಮೊಗರು ಜಲಾವೃತಗೊಂಡು ನಡುಗಡ್ಡೆಯಂತಾಗಿದೆ. ಜನ ಮನೆಯ ಟೆರೇಸ್ ಮೇಲೆ ಆಶ್ರಯ ಪಡೆದಿದ್ದಾರೆ. ಮಳೆ ಇನ್ನಷ್ಟು ಹೆಚ್ಚಾಗುವ ಆತಂಕದಲ್ಲಿ ನಿವಾಸಿಗಳಿದ್ದಾರೆ. ಜಪ್ಪಿನಮೊಗರು ಊರಿನ ಟಾಪ್ ಆ್ಯಂಗಲ್ ದೃಶ್ಯ ‘ಟಿವಿ9’ ಕ್ಯಾಮರಾದಲ್ಲಿ ಸೆರೆಯಾಗಿದೆ.