AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮಣ್​​ ಸವದಿ ಪ್ಲ್ಯಾನ್​​ ಫ್ಲಾಪ್​​: ಶಾಸಕನ ಕನಸಿಗೆ ಎಳ್ಳು ನೀರು ಬಿಟ್ಟ ಜಾರಕಿಹೊಳಿ ಬ್ರದರ್ಸ್​

ಲಕ್ಷ್ಮಣ್​​ ಸವದಿ ಪ್ಲ್ಯಾನ್​​ ಫ್ಲಾಪ್​​: ಶಾಸಕನ ಕನಸಿಗೆ ಎಳ್ಳು ನೀರು ಬಿಟ್ಟ ಜಾರಕಿಹೊಳಿ ಬ್ರದರ್ಸ್​

ಸಹದೇವ್​ ಮಾನೆ
| Edited By: |

Updated on: Dec 04, 2025 | 3:50 PM

Share

ಮಂತ್ರಿ ಸ್ಥಾನ ಸಿಗದಿದ್ದರೆ ಅಪೆಕ್ಸ್​​ ಬ್ಯಾಂಕ್​​ ಅಧ್ಯಕ್ಷ ಆದರೂ ಆಗಬೇಕೆಂದು ಕನಸು ಕಂಡಿದ್ದ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಕನಸಿಗೆ ಜಾರಕಿಹೊಳಿ ಬ್ರದರ್ಸ್​​ ಎಳ್ಳುನೀರು ಬಿಟ್ಟಿದ್ದಾರೆ. ಆ ಮೂಲಕ ಬೆಳಗಾವಿ ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಕಳೆದ ಎರಡು ದಶಕಗಳಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುತ್ತಿದ್ದ ಸವದಿ ಅವರಿಗೆ ಈ ಬಾರಿ ಅವಕಾಶ ತಪ್ಪಿದೆ.

ಬೆಳಗಾವಿ, ಡಿಸೆಂಬರ್​​ 04: ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಬೆಳವಣಿಗೆಯಾಗಿದ್ದು, ಅಪೆಕ್ಸ್ ಬ್ಯಾಂಕ್‌ ಮೇಲೆ ಕಣ್ಣಿಟ್ಟಿದ್ದ ಮಾಜಿ ಡಿಸಿಎಂ ಲಕ್ಷ್ಮಣ ‌ಸವದಿಗೆ ಜಾರಕಿಹೊಳಿ‌ ಬ್ರದರ್ಸ್ ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಜಾರಕಿಹೊಳಿ‌ ಫ್ಯಾಮಿಲಿ ಹಿಡಿತ ಸಾಧಿಸಿದ್ದು, ಲಕ್ಷ್ಮಣ ಸವದಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಟಕ್ಕರ್​​ ಕೊಟ್ಟಿದ್ದಾರೆ. ಕಳೆದ ಎರಡು ದಶಕಗಳಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಸವದಿ ಆಯ್ಕೆಯಾಗುತ್ತಿದ್ದರು. ಬೆಳಗಾವಿ ಡಿಸಿಸಿ ಬ್ಯಾಂಕ್ ಮೂಲಕ ಅಪೆಕ್ಸ್ ಬ್ಯಾಂಕ್‌ಗೆ ಹೋಗುತ್ತಿದ್ದರು. ಆದರೆ ಈ ಬಾರಿ ಆ ಸ್ಥಾನ ಸತೀಶ್ ಜಾರಕಿಹೊಳಿ‌ ಪುತ್ರ ರಾಹುಲ್​​ ಪಾಲಾಗಿದೆ. ‌ಹೀಗಾಗಿ ಮಂತ್ರಿ ಸ್ಥಾನ ಸಿಗದಿದ್ದರೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಬೇಕೆಂಬ ಲಕ್ಷ್ಮಣ ಸವದಿ ಕನಸಿಗೆ ಜಾರಕಿಹೊಳಿ‌ ಬ್ರದರ್ಸ್ ಎಳ್ಳು ನೀರು ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More