ಲಕ್ಷ್ಮಣ್ ಸವದಿ ಪ್ಲ್ಯಾನ್ ಫ್ಲಾಪ್: ಶಾಸಕನ ಕನಸಿಗೆ ಎಳ್ಳು ನೀರು ಬಿಟ್ಟ ಜಾರಕಿಹೊಳಿ ಬ್ರದರ್ಸ್
ಮಂತ್ರಿ ಸ್ಥಾನ ಸಿಗದಿದ್ದರೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆದರೂ ಆಗಬೇಕೆಂದು ಕನಸು ಕಂಡಿದ್ದ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಕನಸಿಗೆ ಜಾರಕಿಹೊಳಿ ಬ್ರದರ್ಸ್ ಎಳ್ಳುನೀರು ಬಿಟ್ಟಿದ್ದಾರೆ. ಆ ಮೂಲಕ ಬೆಳಗಾವಿ ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಕಳೆದ ಎರಡು ದಶಕಗಳಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುತ್ತಿದ್ದ ಸವದಿ ಅವರಿಗೆ ಈ ಬಾರಿ ಅವಕಾಶ ತಪ್ಪಿದೆ.
ಬೆಳಗಾವಿ, ಡಿಸೆಂಬರ್ 04: ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಬೆಳವಣಿಗೆಯಾಗಿದ್ದು, ಅಪೆಕ್ಸ್ ಬ್ಯಾಂಕ್ ಮೇಲೆ ಕಣ್ಣಿಟ್ಟಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಜಾರಕಿಹೊಳಿ ಬ್ರದರ್ಸ್ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಜಾರಕಿಹೊಳಿ ಫ್ಯಾಮಿಲಿ ಹಿಡಿತ ಸಾಧಿಸಿದ್ದು, ಲಕ್ಷ್ಮಣ ಸವದಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಟಕ್ಕರ್ ಕೊಟ್ಟಿದ್ದಾರೆ. ಕಳೆದ ಎರಡು ದಶಕಗಳಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಸವದಿ ಆಯ್ಕೆಯಾಗುತ್ತಿದ್ದರು. ಬೆಳಗಾವಿ ಡಿಸಿಸಿ ಬ್ಯಾಂಕ್ ಮೂಲಕ ಅಪೆಕ್ಸ್ ಬ್ಯಾಂಕ್‌ಗೆ ಹೋಗುತ್ತಿದ್ದರು. ಆದರೆ ಈ ಬಾರಿ ಆ ಸ್ಥಾನ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಪಾಲಾಗಿದೆ. ಹೀಗಾಗಿ ಮಂತ್ರಿ ಸ್ಥಾನ ಸಿಗದಿದ್ದರೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಬೇಕೆಂಬ ಲಕ್ಷ್ಮಣ ಸವದಿ ಕನಸಿಗೆ ಜಾರಕಿಹೊಳಿ ಬ್ರದರ್ಸ್ ಎಳ್ಳು ನೀರು ಬಿಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
