IND vs SA: ಈಡನ್ ಗಾರ್ಡನ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ
Jasprit Bumrah's Fiery 5-Fer: ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಐದು ವಿಕೆಟ್ ಪಡೆದು ಅದ್ಭುತ ಪ್ರದರ್ಶನ ನೀಡಿದ್ದಾರೆ. ಇದು ಅವರ ವೃತ್ತಿಜೀವನದ 16ನೇ ಐದು ವಿಕೆಟ್ ಸಾಧನೆಯಾಗಿದ್ದು, SENA ರಾಷ್ಟ್ರಗಳಲ್ಲಿ 13ನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ. ವಾಸಿಂ ಅಕ್ರಮ್ ಅವರ ದಾಖಲೆ ಮುರಿದು, ಶ್ರೀನಾಥ್ ಮತ್ತು ಹರ್ಭಜನ್ ಸಿಂಗ್ ಅವರ ದಕ್ಷಿಣ ಆಫ್ರಿಕಾ ವಿರುದ್ಧದ ಐದು ವಿಕೆಟ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮೊದಲ ಇನ್ನಿಂಗ್ಸ್ ಕೇವಲ 159 ರನ್‌ಗಳಿಗೆ ಕೊನೆಗೊಂಡಿದೆ. ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ 200 ರನ್ ಕೂಡ ದಾಖಲಿಸಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ ಐದು ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಕೆಲವು ವಿಶಿಷ್ಟ ದಾಖಲೆಗಳನ್ನು ನಿರ್ಮಿಸಿದರು.
ಬುಮ್ರಾ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 16 ನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಆದಾಗ್ಯೂ, ಈ ಬಾರಿ ಅವರ ಸಾಧನೆ ಸ್ವಲ್ಪ ವಿಶೇಷವಾಗಿದೆ. ಇದಕ್ಕೆ ಪ್ರಮುಖ ಕಾರಣ ಈಡನ್ ಗಾರ್ಡನ್ಸ್, ಅಲ್ಲಿ ಅವರು ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಈಡನ್ ಗಾರ್ಡನ್ಸ್‌ನಲ್ಲಿ ಬುಮ್ರಾ ಐದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವುದು ಇದೇ ಮೊದಲು ಎಂದು ಹೇಳಿದರೆ ತಪ್ಪಾಗಲಾರದು.
ಬುಮ್ರಾ ತಮ್ಮ ವೃತ್ತಿಜೀವನದಲ್ಲಿ 16 ನೇ ಬಾರಿಗೆ ಒಂದು ಇನ್ನಿಂಗ್ಸ್‌ನಲ್ಲಿ ಐದಗಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ ಇದರಲ್ಲಿ 13 ಬಾರಿ SENA ದೇಶಗಳ ವಿರುದ್ಧವೇ ಈ ಸಾಧನೆ ಮಾಡಿದ್ದಾರೆ. ಈ ವಿಷಯದಲ್ಲಿ ಬುಮ್ರಾ, ವಾಸಿಮ್ ಅಕ್ರಮ್ (12 ಬಾರಿ) ಅವರ ದಾಖಲೆಯನ್ನು ಮುರಿದಿದ್ದಾರೆ. ಇದು ಮಾತ್ರವಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ನಾಲ್ಕನೇ ಬಾರಿಗೆ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಜಾವಗಲ್ ಶ್ರೀನಾಥ್ ಮತ್ತು ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ