VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್ಪ್ರೀತ್ ಬುಮ್ರಾ
IND vs ENG: ಲೀಡ್ಸ್ನಲ್ಲಿ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 471 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 209 ರನ್ಗಳಿಸಿದೆ.
ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (101), ಶುಭ್ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಭಾರತ ತಂಡವು ಪ್ರಥಮ ಇನಿಂಗ್ಸ್ನಲ್ಲಿ 471 ರನ್ ಕಲೆಹಾಕಿತು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದರು. ಮೊದಲ ಓವರ್ನ ಕೊನೆಯ ಎಸೆತದಲ್ಲಿ ಝಾಕ್ ಕ್ರಾಲಿ (4) ವಿಕೆಟ್ ಕಬಳಿಸಿ ಬುಮ್ರಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದಾದ ಬಳಿಕ ಬೆನ್ ಡಕೆಟ್ (62) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.
ಇನ್ನು ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ಗೂ (28) ಪೆವಿಲಿಯನ್ ಹಾದಿ ತೋರಿಸುವಲ್ಲಿ ಬುಮ್ರಾ ಯಶಸ್ವಿಯಾದರು. ಆ ಬಳಿಕ ಬಂದ ಹ್ಯಾರಿ ಬ್ರೂಕ್ ಶೂನ್ಯಕ್ಕೆ ಔಟಾಗಬೇಕಿತ್ತು. ಆದರೆ ಕ್ರೀಸ್ ಲೈನ್ ದಾಟುವ ಮೂಲಕ ಜಸ್ಪ್ರೀತ್ ಬುಮ್ರಾ ಬ್ರೂಕ್ಗೆ ಜೀವದಾನ ನೀಡಿದರು.
ಇಂಗ್ಲೆಂಡ್ ಇನಿಂಗ್ಸ್ನ ಕೊನೆಯ ಓವರ್ನ 4ನೇ ಎಸೆತದಲ್ಲಿ ಹ್ಯಾರಿ ಬ್ರೂಕ್ ಪುಲ್ ಶಾಟ್ ಬಾರಿಸಲು ಯತ್ನಿಸಿದ್ದರು. ಆದರೆ ಬ್ಯಾಟ್ಗೆ ತಾಗಿ ಚೆಂಡು ಗಾಳಿಯಲ್ಲಿ ತೇಲಿತು. ಇತ್ತ ಕಡೆಯಿಂದ ಓಡಿ ಬಂದ ಮೊಹಮ್ಮದ್ ಸಿರಾಜ್ ಡೈವಿಂಗ್ ಕ್ಯಾಚ್ ಹಿಡಿದರು. ಇತ್ತ 2ನೇ ದಿನದಾಟದ ಕೊನೆಯಲ್ಲಿ ವಿಕೆಟ್ ಸಿಕ್ಕ ಖುಷಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಸಂಭ್ರಮಿಸಲಾರಂಭಿಸಿದರೆ, ಅತ್ತ ಅಂಪೈರ್ ನೋ ಬಾಲ್ ಎಂದರು.
ಜಸ್ಪ್ರೀತ್ ಬುಮ್ರಾ ಲೈನ್ ನೋ ಬಾಲ್ ಮಾಡಿದ್ದರಿಂದ ಶೂನ್ಯಕ್ಕೆ ಔಟಾಗಬೇಕಿದ್ದ ಹ್ಯಾರಿ ಬ್ರೂಕ್ಗೆ ಜೀವದಾನ ಲಭಿಸಿತು. ಇದರಿಂದ 4ನೇ ವಿಕೆಟ್ ತನ್ನದಾಗಿಸಿಕೊಳ್ಳುವ ಅವಕಾಶವನ್ನು ಬುಮ್ರಾ ಕೈಚೆಲ್ಲಿಕೊಂಡರು. ಇತ್ತ ಇಂಗ್ಲೆಂಡ್ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿದೆ.

ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್ಫಾರ್ಮ್ಗೆ ಬಂದ ಪತಿ

ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್
