VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 382 ರನ್ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಢಿಯಾ 2ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ಕೆಎಲ್ ರಾಹುಲ್ (53) ಹಾಗೂ ರಿಷಭ್ ಪಂತ್ (16) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮಾರಕ ದಾಳಿ ಸಂಘಟಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 27 ಓವರ್ಗಳನ್ನು ಎಸೆದಿರುವ ಬುಮ್ರಾ 74 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಐದು ವಿಕೆಟ್ ಕಬಳಿಸಬೇಕೆಂಬ ತಮ್ಮ ಬಹುಕಾಲದ ಕನಸನ್ನು ಬುಮ್ರಾ ಈಡೇರಿಸಿಕೊಂಡಿದ್ದಾರೆ.
ಈ ಭರ್ಜರಿ ಬೌಲಿಂಗ್ನೊಂದಿಗೆ ಇಂಗ್ಲೆಂಡ್ ತಂಡವನ್ನು ಮೊದಲ ಇನಿಂಗ್ಸ್ನಲ್ಲಿ 382 ರನ್ಗಳಿಗೆ ಆಲೌಟ್ ಮಾಡಿದ ಬುಮ್ರಾಗೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸೇರಿದಂತೆ ಸಹ ಆಟಗಾರರು ಭವ್ಯ ಸ್ವಾಗತ ನೀಡಿದರು. ಈ ವಿಡಿಯೋವನ್ನು ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಢಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 382 ರನ್ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಢಿಯಾ 2ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ಕೆಎಲ್ ರಾಹುಲ್ (53) ಹಾಗೂ ರಿಷಭ್ ಪಂತ್ (16) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.