ಬಾಬರಿ ಮಸೀದಿ ನಿರ್ಮಿಸಲು ನೆಹರು ಸಾರ್ವಜನಿಕ ನಿಧಿಯನ್ನು ಕೋರಿದ್ದರು; ಕೇಂದ್ರ ಸಚಿವ ರಾಜನಾಥ್ ಸಿಂಗ್
ಪಂಡಿತ್ ಜವಾಹರಲಾಲ್ ನೆಹರು ಅವರು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡು ಬಾಬರಿ ಮಸೀದಿಯನ್ನು ನಿರ್ಮಿಸಲು ಬಯಸಿದ್ದರು. ಈ ಪ್ರಸ್ತಾಪವನ್ನು ವಿರೋಧಿಸಿದವರೆಂದರೆ ಗುಜರಾತಿ ತಾಯಿಗೆ ಜನಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್. ಅವರು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡು ಬಾಬರಿ ಮಸೀದಿಯನ್ನು ನಿರ್ಮಿಸಲು ಅನುಮತಿಸಲಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ನವದೆಹಲಿ, ಡಿಸೆಂಬರ್ 3: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಬಾಬರಿ ಮಸೀದಿ ನಿರ್ಮಿಸಲು ಸಾರ್ವಜನಿಕ ನಿಧಿಯನ್ನು ಕೋರಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದ್ದಾರೆ. ನೆಹರು ಅವರ ಈ ಕೋರಿಕೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಒಪ್ಪದೆ, ಈ ಯೋಜನೆಯನ್ನು ಮುಂದುವರಿಸದಂತೆ ತಡೆದಿದ್ದರು ಎಂದಿದ್ದಾರೆ. ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಗುಜರಾತ್‌ನಲ್ಲಿ ನಡೆದ ‘ಏಕತಾ ಮೆರವಣಿಗೆ’ಯಲ್ಲಿ ಮಂಗಳವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ