ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ
ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲು ತೀರ್ಮಾನಿಸಲಾಗಿದೆ. ಇಂದು (ಸೆಪ್ಟೆಂಬರ್ 21) ಪೀಠದಲ್ಲಿ ನಡೆದ ಟ್ರಸ್ಟ್ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕೂಡಲಸಂಗಮ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.
ಬಾಗಲಕೋಟೆ, (ಸೆಪ್ಟೆಂಬರ್ 21) ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಅವರನ್ನು ಉಚ್ಚಾಟನೆ ಮಾಡಲು ತೀರ್ಮಾನಿಸಲಾಗಿದೆ. ಇಂದು (ಸೆಪ್ಟೆಂಬರ್ 21) ಪೀಠದಲ್ಲಿ ನಡೆದ ಟ್ರಸ್ಟ್ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕೂಡಲಸಂಗಮ ಪಂಚಮಸಾಲಿ ಟ್ರಸ್ಟ್ ಕಾರ್ಯದರ್ಶಿ ನೀಲಕಂಠ ಅಸೂಟಿ ತಿಳಿಸಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಯದರ್ಶಿ ನೀಲಕಂಠ ಅಸೂಟಿ , ದಾವಣಗೆರೆ ಹಾಗೂ ಇತರೆ ಕಡೆ ಆಸ್ತಿ ಮಾಡಿದ್ದಾರೆ. ಹಾಗೇ ಲಿಂಗಾಯತ ತತ್ವ ಬಿಟ್ಟು ಹಿಂದುತ್ವ ಪರ ಹೊರಟಿದ್ದಾರೆ. ಟ್ರಸ್ಟ್ ಸದಸ್ಯರ ಮಾತು ಕೇಳೋದಿಲ್ಲ. ಪೀಠದಲ್ಲಿ ಇರೋದಿಲ್ಲ. ಒಂದು ಪಕ್ಷದ ಪರ ಹೊರಟಿದ್ದಾರೆ. ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ಹೀಗೆ ಅನೇಕ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ ಎಂದು ಹೇಳಿದರು.

