ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಟಿ ಜಯಮಾಲಾ

Updated on: Feb 01, 2026 | 12:54 PM

ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆ ಆದ ಜಯಮಾಲಾ (Jayamala) ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. 1970ರ ದಶಕದಿಂದಲೂ ನಟಿಯಾಗಿ ಜಯಮಾಲಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ (Karnataka Film Chamber of Commerce President) ಕಾರ್ಯ ನಿರ್ವಹಿಸಿದ್ದರು. ‘ಚಿತ್ರೋದ್ಯಮದ ಹಿತದೃಷ್ಟಿಯಿಂದ ಹೊಸ ಅಧ್ಯಕ್ಷರು ಬಂದಿದ್ದಾರೆ. ಈ ವರ್ಷ ಒಳ್ಳೊಳ್ಳೆಯ ಕೆಲಸ ಮಾಡಲು ನಮಗೆಲ್ಲ ಸಹಕಾರಿ ನೀಡಿ, ಚಿತ್ರೋದ್ಯಮದ ಅಭಿವೃದ್ಧಿಗಾಗಿ ಕೆಲಸ ಮಾಡಲಿ’ ಎಂದು ನಿರ್ಮಾಪಕ ಕೆ. ಮಂಜು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More