AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​ಡಿ ದೇವೇಗೌಡ, ಹೆಚ್​​ಡಿ ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಪೂಜೆ: 101 ಈಡುಗಾಯಿ ಒಡೆದ​​ ಕಾರ್ಯಕರ್ತರು

ಹೆಚ್​​ಡಿ ದೇವೇಗೌಡ, ಹೆಚ್​​ಡಿ ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಪೂಜೆ: 101 ಈಡುಗಾಯಿ ಒಡೆದ​​ ಕಾರ್ಯಕರ್ತರು

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 11, 2025 | 8:49 PM

Share

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಉತ್ತಮ ಆರೋಗ್ಯಕ್ಕಾಗಿ ಜೆಡಿಎಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕರ್ತರು 101 ತೆಂಗಿನಕಾಯಿ ಒಡೆದು ತಮ್ಮ ಹರಕೆ ತೀರಿಸಿದರು. ವಿಡಿಯೋ ಇಲ್ಲಿದೆ ನೋಡಿ.

ಚಿಕ್ಕಬಳ್ಳಾಪುರ, ಅಕ್ಟೋಬರ್​ 11: ಮಾಜಿ ಪ್ರಧಾನಿ ಹೆಚ್​ಡಿ ದೇವೆಗೌಡ ಹಾಗೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಯವರ ಆರೋಗ್ಯ ಮತ್ತಷ್ಟು ಚೇತರಿಕೆಯಾಗಲಿ ಎಂದು ಅವರ ಹೆಸರಲ್ಲಿ ಜೆಡಿಎಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರ ನಗರ ಹೊರವಲಯದ ಶ್ರೀವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಸ್ಥಾನದ ಮುಂಬಾಗ 101 ತೆಂಗಿನಕಾಯಿ ಈಡುಗಾಯಿ ಹೊಡೆದು ಹರಕೆ ತೀರಿಸಿದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.