ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ಹೀಗಿದೆ ದಳಪತಿಗಳ ಲೆಕ್ಕಾಚಾರ

Edited By:

Updated on: May 21, 2026 | 10:25 AM

ಡಿ. ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಅಭ್ಯರ್ಥಿಯ ಆಯ್ಕೆ, ಗೆಲುವು ಹಾಗೂ ಮುಂದಿನ ಚುನಾವಣೆಯ ಲೆಕ್ಕಾಚಾರದೊಂದಿಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ಕುಮಾರಸ್ವಾಮಿ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಲು ಸಿದ್ಧರಾಗಿದ್ದಾರೆ. ಒಕ್ಕಲಿಗ ಮತ್ತು ಯಾದವ ಸಮುದಾಯದ ಮತಗಳು ಇಲ್ಲಿ ನಿರ್ಣಾಯಕವಾಗಿದ್ದು, ಎನ್‌ಡಿಎ ಮೈತ್ರಿ ಅಭ್ಯರ್ಥಿಗೆ ಗೆಲುವು ಸುಲಭವಾಗಲಿದೆ ಎಂಬುದು ಜೆಡಿಎಸ್ ಲೆಕ್ಕಾಚಾರ.

ಚಿತ್ರದುರ್ಗ, ಮೇ 21: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಸಿದ್ಧತೆ ನಡೆಸುತ್ತಿದೆ. ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ಗೆಲ್ಲಲು ಜೆಡಿಎಸ್ ಉತ್ಸುಕವಾಗಿದೆ. ಪಕ್ಷದ ವರಿಷ್ಠ ಹೆಚ್.ಡಿ. ಕುಮಾರಸ್ವಾಮಿ ಅವರು ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಿ, ಟಿಕೆಟ್ ತರುವುದು ನನ್ನ ಜವಾಬ್ದಾರಿ, ಗೆಲ್ಲಿಸುವುದು ನಿಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ. ಹಿರಿಯೂರು ಕ್ಷೇತ್ರದಲ್ಲಿ ಒಕ್ಕಲಿಗ ಮತ್ತು ಯಾದವ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಹೀಗಾಗಿ ಈ ಸಮುದಾಯಗಳಿಂದಲೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಲೆಕ್ಕಾಚಾರವಿದೆ. 2023ರ ಚುನಾವಣೆಯಲ್ಲಿ ಜೆಡಿಎಸ್ 38,686 ಮತಗಳನ್ನು ಪಡೆದಿದ್ದರೆ, ಬಿಜೆಪಿ 61,728 ಮತಗಳನ್ನು ಗಳಿಸಿತ್ತು. ಹೀಗಾಗಿ ಎನ್‌ಡಿಎ ಮೈತ್ರಿ ಅಭ್ಯರ್ಥಿಗೆ ಗೆಲುವು ಖಚಿತ ಎಂಬ ವಿಶ್ವಾಸ ಜೆಡಿಎಸ್ ನಾಯಕರಿಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 21, 2026 10:23 AM
Follow Us
Sunil MH