ಲೋಕಸಭಾ ಚುನಾವಣೆಗೆ ಜೆಡಿಎಸ್​-ಬಿಜೆಪಿ ಮೈತ್ರಿ ಪಕ್ಕಾ, ದೇವೇಗೌಡ್ರು ಬೇಡಿಕೆ ಇಟ್ಟ ಕ್ಷೇತ್ರಗಳು ಎಷ್ಟು? ಅವು ಯಾವುವು? ಇಲ್ಲಿದೆ ವಿವರ

| Updated By: ರಮೇಶ್ ಬಿ. ಜವಳಗೇರಾ

Updated on: Sep 08, 2023 | 10:54 AM

ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡು ಒಟ್ಟಿಗೆ ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಮುಂದಾಗಿವೆ. ಈ ಬಗ್ಗೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ನಾಯಕರ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಮೈತ್ರಿ ಪಕ್ಕಾ ಎನ್ನಲಾಗುತ್ತಿದೆ. ಆದ್ರೆ, ಪ್ರಧಾನಿ ನರೇಂದ್ರ ಮೋದಿ ಅವರ ಒಂದೇ ಒಂದು ಅನುಮತಿ ನೀಡುವುದೊಂದೇ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು (ಸೆ.08): ವಿಧಾನಸಭೆಯಲ್ಲಿ ಮೊಳಗಿಸಿದ ವಿಜಯ ದುಂದುಬಿಯನ್ನು, ಲೋಕಸಭೆಯಲ್ಲೂ (Loksabha Elections 2024) ಹಾರಿಸಬೇಕೆಂಬುದು ಕಾಂಗ್ರೆಸ್​(Congress) ನಾಯಕರ ಮಹದಾಸೆ. ಹೀಗಾಗಿಯೇ, ಬಿಜೆಪಿ ಹಾಲಿ ಶಾಸಕರು, ಸೋತಿರುವ ಪ್ರಭಾವಿ ಮಾಜಿ ಶಾಸಕರು, ಬಿಜೆಪಿ, ಜೆಡಿಎಸ್‌ನ ಪ್ರಭಾವಿ ಮುಖಂಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ. ಮತ್ತೊಂದೆಡೆ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡು ಒಟ್ಟಿಗೆ ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಮುಮದಾಗಿವೆ. ಹೌದು…ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ನಾಯಕರ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಮೈತ್ರಿ ಪಕ್ಕಾ ಎನ್ನಲಾಗುತ್ತಿದೆ. ಆದ್ರೆ, ಪ್ರಧಾನಿ ನರೇಂದ್ರ ಮೋದಿ ಅವರ ಒಂದೇ ಒಂದು ಅನುಮತಿ ನೀಡುವುದೊಂದೇ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ.

ದೇವೇಗೌಡ ಅವರು ಬಿಜೆಪಿ ನಾಯಕರೊಂದಿಗೆ ನಡೆಸಿದ್ದ ಮಾತುಕತೆ ಯಶಸ್ವಿಯಾಗಿದ್ದಲ್ಲದೇ ಕ್ಷೇತ್ರ ಹಂಚಿಕೆ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ದೇವೇಗೌಡ ಅವರು ಐದು ಲೋಕಸಭಾ ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡುವಂತೆ ದೇವೇಗೌಡ್ರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಹುತೇಕ ಹಳೇ ಮೈಸೂರು ಭಾಗದ ಕ್ಷೇತ್ರಗಳನ್ನೇ ದೇವೇಗೌಡ್ರು ಹೇಳಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಜೆಡಿಎಸ್​ ಕೇಳಿದ ಕ್ಷೇತ್ರಗಳಾವುವು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ