Loading video

ಅಧಿಕಾರದಿಂದ ಬಿಜೆಪಿಯನ್ನೇ ದೂರವಿಟ್ಟು ಮೈತ್ರಿ ಮಾಡಿಕೊಂಡ ಕಾಂಗ್ರೆಸ್​-ಜೆಡಿಎಸ್​

|

Updated on: Feb 10, 2025 | 11:00 PM

ಜೆಡಿಎಸ್​ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಎರಡು ಪಕ್ಷದ ನಾಯಕರು ಸೇರಿಕೊಂಡು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿಳುತ್ತಿದ್ದು, ಜೆಡಿಎಸ್​ ಹಾಗೂ ಕಾಂಗ್ರೆಸ್ ನಾಯಕರು ಹಾವು ಮುಂಗುಸಿಯಂತೆ ಇದ್ದಾರೆ. ಅದರಲ್ಲೂ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ಶಳಿ ನಡೆಸುತ್ತಲ್ಲೇ ಇದ್ದಾರೆ. ಇದರ ಮಧ್ಯೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‌, JDS ಮೈತ್ರಿ ಮಾಡಿಕೊಂಡಿವೆ.

ದೇವನಹಳ್ಳಿ, (ಫೆಬ್ರವರಿ 10): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಚುನಾವಣೆಯಲ್ಲಿ ಎರಡೂ ಪಕ್ಷಗಳು ಸೇರಿಕೊಂಡು ಕಾಂಗ್ರೆಸ್​ ವಿರುದ್ಧ ಮುಗಿಬಿದ್ದಿದ್ದವು. ಅಲ್ಲದೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲ್ಲೇ ಇದ್ದಾರೆ. ಇದರ ಮಧ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯನ್ನು ದೂರವಿಟ್ಟು ಕಾಂಗ್ರೆಸ್‌, JDS ಮೈತ್ರಿ ಮಾಡಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ. ಕಾಂಗ್ರೆಸ್ ಬೆಂಬಲಿತ ಮುನಿಕೃಷ್ಣ ಅವರು ದೇವನಹಳ್ಳಿ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರವೀಂದ್ರ ಅವಿರೋಧ ಆಯ್ಕೆಯಾದರು. ಈ ಮೂಲಕ ಬಿಜೆಪಿಯನ್ನು ಅಧಿಕಾರಿಂದ ದೂರ ಇಟ್ಟಿವೆ.