ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು?

Edited By:

Updated on: Dec 31, 2025 | 3:55 PM

ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕಾರ, ರೈತರ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡದಿರುವುದು ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಕುಮಾರಸ್ವಾಮಿಯವರ ಹಿಂದಿನ ಆಡಳಿತವನ್ನು ಸ್ಮರಿಸಿದ ಜೆಡಿಎಸ್, ಪ್ರಸ್ತುತ ಸರ್ಕಾರದ ನೀತಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಬೆಂಗಳೂರು, ಡಿಸೆಂಬರ್​​ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​​ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್​​ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆದಿದ್ದರೂ ಮುಖ್ಯಮಂತ್ರಿಗಳು ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸಿಲ್ಲ ಎಂದು ಜೆಡಿಎಸ್​​ ಆರೋಪಿಸಿದೆ. ಅಲ್ಲದೆ, ಕೋಗಿಲು ಲೇಔಟ್‌ನಲ್ಲಿ ಮನೆಗಳನ್ನು ತೆರವುಗೊಳಿಸುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದ್ದು, ಇದು ಜನವಿರೋಧಿ ನೀತಿ ಎಂದು ಕರೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.