ರಿಲ್ಯಾಕ್ಸ್ ಮೂಡಲ್ಲಿ ಜಿಟಿ ದೇವೇಗೌಡ: ಮೊಮ್ಮಕ್ಕಳ ಜೊತೆ ಕ್ರಿಕೆಟ್ ಆಡಿದ ಜೆಡಿಎಸ್ ಅಭ್ಯರ್ಥಿ
ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜಕೀಯ ನಾಯಕರು ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ. ಮೊಮ್ಮಕ್ಕಳ ಜೊತೆ ಕ್ರಿಕೆಟ್ ಆಡಿ ಜಿ.ಟಿ.ದೇವೇಗೌಡ ಅವರು ಎಂಜಾಯ್ ಮಾಡಿದ್ದಾರೆ.
ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ನಿನ್ನೆ ಮತದಾನ ಮುಗಿದಿದ್ದು, ಬಹು ನಿರೀಕ್ಷೆಯ ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದೆ. ಈ ಹಿನ್ನೆಲೆ ಕೆಲ ರಾಜಕೀಯ ನಾಯಕರು ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ. ಮೈಸೂರು ಚಾಮುಂಡೇಶ್ವರಿ ಚುನಾವಣೆ ಕದನದಲ್ಲಿ ಮತ ಯುದ್ಧ ಮುಗಿಸಿರುವ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಮೊಮ್ಮಕ್ಕಳ ಜೊತೆ ಮನೆಯಲ್ಲಿಯೇ ಕ್ರಿಕೆಟ್ ಆಡಿ ಕಾಲ ಕಳೆದಿದ್ದಾರೆ. ತಾತ ಗೆಲ್ಲುತ್ತಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಮಕ್ಕಳು ಖುಷಿ ವ್ಯಕ್ತಪಡಿಸಿದರು. ಬಳಿಕ ಮತದಾನದ ಬಗ್ಗೆ ಕ್ಷೇತ್ರದ ಬೆಂಬಲಿಗರೊಂದಿಗೆ ಸಮಲೋಚನೆ ಮಾಡಿದ್ದು, ಬಾರಿ ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos