AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಸಿದ್ದರಾಮಯ್ಯ ಸ್ಟಿಂಗ್​​ ಮಾಡಿಸಿದ್ದು ಜನತಾ ದಳ'​​: ಸಚಿವ ಚಲುವರಾಯಸ್ವಾಮಿ ಹೊಸ ಬಾಂಬ್​

‘ಸಿದ್ದರಾಮಯ್ಯ ಸ್ಟಿಂಗ್​​ ಮಾಡಿಸಿದ್ದು ಜನತಾ ದಳ’​​: ಸಚಿವ ಚಲುವರಾಯಸ್ವಾಮಿ ಹೊಸ ಬಾಂಬ್​

ಪ್ರಸನ್ನ ಗಾಂವ್ಕರ್​
| Edited By: |

Updated on:Oct 14, 2026 | 12:03 PM

Share

ಸ್ಟಿಂಗ್​​ ಆಪರೇಷನ್​​ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ನಿರ್ಬಂಧಕಾಜ್ಞೆ ತಂದಿರುವ ಬಗ್ಗ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯನವರ ನಾಯಕತ್ವ, ಅವರ ಲೀಡರ್‌ಶಿಪ್, ಅವರು ಬಂದ ದಾರಿ ಎಲ್ಲ ಗೊತ್ತಿದೆ. ಅವರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆದಿದ್ದು, ಈ ರೀತಿಯ ಕೆಲಸ ಜನತಾ ದಳದವರು ಬಿಟ್ಟು ಇನ್ಯಾರು ಮಾಡೋಕೆ ಸಾಧ್ಯ? ಎಂದವರು ಪ್ರಶ್ನಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 14: ಸ್ಟಿಂಗ್​​ ಆಪರೇಷನ್​​ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ನಿರ್ಬಂಧಕಾಜ್ಞೆ ತಂದಿರುವ ಬಗ್ಗ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯನವರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆದಿದ್ದು, ಈ ರೀತಿಯ ಕೆಲಸ ಜನತಾ ದಳದವರು ಬಿಟ್ಟು ಇನ್ಯಾರು ಮಾಡೋಕೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ಈಗ ಸಿದ್ದರಾಮಯ್ಯ ಬಗ್ಗೆ ಅನುಕಂಪದಿಂದ ಮಾತಾಡ್ತಾ ಇದ್ದಾರೆ. ಪಕ್ಷದಿಂದ ಓಡಿಸಿದಾಗ ಇರದ ಅನುಕಂಪ ಇಂದು ಸಿದ್ದರಾಮಯ್ಯ ಮೇಲೆ ಹೆಚ್​ಡಿಕೆಗೆ ಹುಟ್ಟಿದೆ ಪಾಪ ಎಂದವರು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ನಾಯಕತ್ವ, ಅವರು ಬಂದ ದಾರಿ ಎಲ್ಲರಿಗೂ ಗೊತ್ತಿದೆ. ಯಾರೋ ಒಬ್ಬ ಮೈಕ್ ಹಿಡಿದು ಹೆಸರು ಹೇಳಿಸಿದ್ರೆ ಆಗುತ್ತಾ? ಹೆಚ್​.ಡಿ.ಕುಮಾರಸ್ವಾಮಿ ರೀತಿ ಸಿದ್ದರಾಮಯ್ಯರ ಚರಿತ್ರೆ ಅಲ್ಲ. ಇವರ ರೀತಿ ಸಿದ್ದರಾಮಯ್ಯ ಚರಿತ್ರೆ ಇದ್ರೆ ನಾವು ಒಪ್ಪುತ್ತೇವೆ. ಸಿದ್ದರಾಮಯ್ಯ ಸಿಎಂ ಆದಾಗ ಬರದೆ ಇರೋದು, ಈಗ ಏಕೆ ಬಂತು? ನಮ್ಮ ಪಕ್ಷದಲ್ಲಿ ಗೊಂದಲ ಹುಟ್ಟಿಸಲು ಹೆಚ್​ಡಿಕೆ ಹುನ್ನಾರ ಮಾಡ್ತಿದ್ದಾರೆ ಎಂದು ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 14, 2026 12:02 PM

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More