ಶ್ರೇಯಸ್ ಪಟೇಲ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಜೆಡಿಎಸ್ ಬಾವುಟ: ಇಬ್ಬರು ಪೊಲೀಸ್ ವಶಕ್ಕೆ
ಹಾಸನ(Hassan) ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್(Shreyas Patel) ಅವರು ಪ್ರಜ್ವಲ್ ರೇವಣ್ಣ ಅವರನ್ನು ಹೆಚ್ಚಿನ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನಲೆ ಭರ್ಜರಿ ಗೆಲುವಿನ ಬಳಿಕ ನೂತನ ಸಂಸದ ಶ್ರೇಯಸ್‌ಪಟೇಲ್ ಹೊಳೆನರಸೀಪುರಕ್ಕೆ ಆಗಮಿಸಿದ್ದು, ಈ ವೇಳೆ ಜೆಡಿಎಸ್ ಬಾವುಟ ಹಿಡಿದು ಬೈಕ್‌ನಲ್ಲಿ ಬಂದ ಇಬ್ಬರು ಕಾಂಗ್ರೆಸ್ ನಡುವೆ ನಡುವೆ ಜೆಡಿಎಸ್ ಬಾವುಟ ಪ್ರದರ್ಶನ ಮಾಡಿದರು. ಕೂಡಲೇ ಆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದರು.
ಹಾಸನ, ಜೂ.04: ಲೋಕಸಭಾ ಚುನಾವಣೆಯ ಫಲಿತಾಂಶ ಇಂದು(ಜೂ.04) ಬಂದಿದ್ದು, ಹಾಸನ(Hassan) ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್(Shreyas Patel) ಅವರು ಪ್ರಜ್ವಲ್ ರೇವಣ್ಣ ಅವರನ್ನು ಹೆಚ್ಚಿನ ಅಂತರದಿಂದ ಸೋಲಿಸಿ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನಲೆ ಭರ್ಜರಿ ಗೆಲುವಿನ ಬಳಿಕ ನೂತನ ಸಂಸದ ಶ್ರೇಯಸ್‌ಪಟೇಲ್ ಹೊಳೆನರಸೀಪುರಕ್ಕೆ ಆಗಮಿಸಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಶ್ರೇಯಸ್ ಪಟೇಲ್‌ಗೆ ಭರ್ಜರಿ ಸ್ವಾಗತ ಕೋರಿದರು. ನೂರಾರು ಸಂಖ್ಯೆಯಲ್ಲಿ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ ಅವರನ್ನು ಬರಮಾಡಿಕೊಂಡರು. ಬಳಿಕ ಶ್ರೇಯಸ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಜೆಡಿಎಸ್ ಬಾವುಟ ಹಿಡಿದು ಬೈಕ್‌ನಲ್ಲಿ ಬಂದ ಇಬ್ಬರು ಕಾಂಗ್ರೆಸ್ ನಡುವೆ ನಡುವೆ ಜೆಡಿಎಸ್ ಬಾವುಟ ಪ್ರದರ್ಶನ ಮಾಡಿದರು. ಕೂಡಲೇ ಆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ