ಕಲಬುರಗಿ: ಗಾಣಗಾಪುರ ದತ್ತಾತ್ರೇಯ ದರ್ಶನಕ್ಕೆ ಆಗಮಿಸಿದ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: May 23, 2024 | 12:36 PM

ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿರುವ ದತ್ತಾತ್ತೇಯ ದೇವಸ್ಥಾನಕ್ಕೆ ಕೇವಲ ಕರ್ನಾಟಕ ಮಾತ್ರವಲ್ಲ, ಪಕ್ಕದ ರಾಜ್ಯಗಳಿಂದಲೂ ಜನ ಬಂದು ದತ್ತನ ದರ್ಶನ ಪಡೆಯುತ್ತಾರೆ ಪೂಜೆ ಸಲ್ಲಿಸುತ್ತಾರೆ. ಅದೇ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಲು ರೇವಣ್ಣ ಕಲಬುರಗಿಗೆ ಆಗಮಿಸಿದ್ದಾರೆ.

ಕಲಬುರಗಿ: ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ (HD Revanna) ಇಲ್ಲಿ ಕಾಣುತ್ತಿರೋದು ಹೊಳೆನರಸೀಪುರ (Holenarasipur) ಅಥವಾ ಹಾಸನದಲ್ಲಲ್ಲ, ಬಿಸಿಲುನಾಡು ಕಲಬುರಗಿಯ ವಿಮಾನ ನಿಲ್ದಾಣದ ಹೊರಭಾಗದಲ್ಲಿ (Kalaburagi)! ಹೀಗೆ ಹೇಳೋದಿಕ್ಕೆ ಕಾರಣವಿದೆ ಮಾರಾಯ್ರೆ. ದೂರದ ಕಲಬುರಗಿಯಲ್ಲೂ ಜನ ಅದರಲ್ಲೂ ವಿಶೇಷವಾಗಿ ಮಹಿಳೆಯರು ಅವರೊಂದಿಗೆ ಸೆಲ್ಪೀ ತೆಗೆದುಕೊಳ್ಳಲು ಹಾತೊರೆಯುತ್ತಿದ್ದಾರೆ. ಅಂದರೆ ಈ ಭಾಗದಲ್ಲೂ ಅವರು ಜನಪ್ರಿಯರು! ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ ರೇವಣ್ಣ ಗೆಲುವಾಗಿದ್ದಾರೆ. ಅವರು ಪರಮ ದೈವಭಕ್ತರೆಂದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿರುವ ದತ್ತಾತ್ತೇಯ ದೇವಸ್ಥಾನಕ್ಕೆ ಕೇವಲ ಕರ್ನಾಟಕ ಮಾತ್ರವಲ್ಲ, ಪಕ್ಕದ ರಾಜ್ಯಗಳಿಂದಲೂ ಜನ ಬಂದು ದತ್ತನ ದರ್ಶನ ಪಡೆಯುತ್ತಾರೆ ಪೂಜೆ ಸಲ್ಲಿಸುತ್ತಾರೆ. ಅದೇ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಲು ರೇವಣ್ಣ ಕಲಬುರಗಿಗೆ ಆಗಮಿಸಿದ್ದಾರೆ. ಅಲ್ಲಿಂದ ಅವರು ಪಕ್ಷದ ಸ್ಥಳೀಯ ಕಾರ್ಯಕರ್ತರೊಂದಿಗೆ ಕಾರಲ್ಲಿ ಗಾಣಗಾಪುರಗೆ ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯಾವ ತನಿಖೆಗೂ ಹೆದರಲ್ಲ, ತಪ್ಪು ಮಾಡದಿರುವಾಗ ಯಾವುದರ ಭಯ? ಹೆಚ್ ಡಿ ರೇವಣ್ಣ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.