ಜೆಡಿಎಸ್ ರಾಜ್ಯಮಟ್ಟದ ಸಮಾವೇಶ ನಡೆಸಿ ಕೃತಕ ಹವಾ ಸೃಷ್ಟಿಸಲು ಮುಂದಾಗಿದೆ: ಯೋಗೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 11, 2024 | 1:41 PM

ಅಬ್ಕಾರಿ ಇಲಾಖೆಯಿಂದ ಹಣ ಸಂಗ್ರಹಿಸಿ ಅದನ್ನು ಜನರಿಗೆ ಹಂಚುವ ಕಾಂಗ್ರೆಸ್ ಹುನ್ನಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಯೋಗೇಶ್ವರ್ ತನ್ನ ಹತ್ತಿರ ಖರ್ಚಿಗೆ ದುಡ್ಡಿಲ್ಲ, ತನ್ನ ಕಷ್ಟ ತನಗೆ ಮಾತ್ರ ಗೊತ್ತು, ಹಾಗಾಗೇ ಕಾಂಗ್ರೆಸ್ ಕುಮಾರಸ್ವಾಮಿ ವೋಟು ಯೋಗೇಶ್ವರ್ ಗೆ ವೋಟು ಅಂತ ಪ್ರಚಾರ ಮಾಡುತ್ತಿದೆ ಎಂದು ಹೇಳಿದರು.

ರಾಮನಗರ: ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿಪಿ ಯೋಗೇಶ್ವರ್, ಪಟ್ಟಣದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಬಹಿರಂಗ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ, ಜೆಡಿಎಸ್ ಪಕ್ಷದವರು ರಾಜ್ಯಮಟ್ಟದ ಸಮಾವೇಶ ನಡೆಸಿ ಸಭೆಗೆ ಎಲ್ಲ ಜಿಲ್ಲೆಗಳ ಕಾರ್ಯಕರ್ತರನ್ನು ಕರೆಸುವ ಮೂಲಕ ಕೃತಕ ಹವಾ ಸೃಷ್ಟಿಸುವ ಪ್ರಯತ್ನದಲ್ಲಿದ್ದಾರೆ, ಕಾಂಗ್ರೆಸ್ ಸಮಾವೇಶ ಚನ್ನಪಟ್ಟಣ ಕ್ಷೇತ್ರಕ್ಕೆ ಮಾತ್ರ ಸೀಮಿತ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಯೋಗೇಶ್ವರ್​ಗೆ ಬಿಜೆಪಿಯಲ್ಲಿ ಅನ್ಯಾಯವಾಗಿದೆ, ಚನ್ನಪಟ್ಟಣ ನನ್ನ ಹುಟ್ಟೂರು: ಸೋಮಶೇಖರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.