Loading video

ಸಿಎಂ ಸಿದ್ದರಾಮಯ್ಯರನ್ನು ಮತ್ತೊಮ್ಮೆ ಹಾಡಿ ಹೊಗಳಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ

Updated on: May 24, 2025 | 3:31 PM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು (ಎಮ್​ಯುಡಿಎ) ಮೈಸೂರು ಅಭಿವೃದ್ಧಿ ಪ್ರಾಧಿಕಾರವನ್ನಾಗಿ (ಎಂ ಡಿ ಎ) ಪರಿವರ್ತಿಸಿದ್ದಕ್ಕೆ ದೇವೇಗೌಡ ಮುಖ್ಯಮಂತ್ರಿಯವರನ್ನು ಕೊಂಡಾಡಿದರು. ಮೈಸೂರು ಜಿಲ್ಲೆಯಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಸರಿಮಾಡಬೇಕಿದೆ, ಅದು ಸಿದ್ದರಾಮಯ್ಯನವರ ಅವಧಿಯಲ್ಲೇ ಆಗಬೇಕು, ಬೇರೆ ಯಾರೇ ಮುಖ್ಯಮಂತ್ರಿಯಾದರೂ ಅದು ಸಾಧ್ಯವಾಗೋದಿಲ್ಲ ಎಂದು ದೇವೇಗೌಡ ಹೇಳಿದರು.

ಮೈಸೂರು, ಮೇ 24: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಿನ್ಕಲ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದಿರಾ ಕ್ಯಾಂಟೀನೊಂದನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಯೋಜಿಸಿದ ಸಾರ್ವಜನಿಕ ಸಭೆಯಲ್ಲಿ ಮಾತಾಡಿದ ಸ್ಥಳೀಯ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದರು. ಬಡವರನ್ನು ದೃಷ್ಟಿಯಲ್ಲಿಟ್ಟುಕೊಂಡು ಅನೇಕ ಕಾರ್ಯಕ್ರಮಗಳನ್ನು ನೀಡಿರುವ ಸಿದ್ದರಾಮಯ್ಯ ನಗರ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಕಂದಾಯ ಪಾವತಿಸಲು ಶೇಕಡ 5ರಷ್ಟು ವಿನಾಯಿತಿಯನ್ನು ಘೋಷಿಸಿರುವುದರಿಂದ ಕಚೇರಿಗಳ ಮುಂದೆ ಜನ ಕ್ಯೂ ನಿಂತಿದ್ದಾರೆ, ಆಗಸ್ಟ್ ವರೆಗೆ ವಿನಾಯಿತಿಯನ್ನು ನೀಡಲಾಗಿದೆ, ಅವಧಿಯನ್ನು ವಿಸ್ತರಿಸಿದರೆ ಎಲ್ಲರೂ ಕಂದಾಯ ಪಾವತಿ ಮಾಡುತ್ತಾರೆ ಎಂದು ದೇವೇಗೌಡ ಹೇಳಿದರು.

ಇದನ್ನೂ ಓದಿ: ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: May 24, 2025 03:30 PM