ಪುತ್ರ ಪ್ರಜ್ವಲ್ ಹೆಸರಲ್ಲಿ ಚಾಮುಂಡೇಶ್ವರಿಗೆ ಅರ್ಚನೆ ಮಾಡಿಸಿದ ಎಚ್‌ಡಿ ರೇವಣ್ಣ

Updated on: May 14, 2024 | 11:08 PM

ಎಚ್​ಡಿ ರೇವಣ್ಣ ಅವರು ಚಾಮುಂಡೇಶ್ವರಿ ದರ್ಶನ ಪಡೆದರು. ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಕಷ್ಟದಿಂದ ಪಾರು ಮಾಡುವಂತೆ ದೇವಿಯ ಮೊರೆ ಹೋದರು. ಆಲ್ಲದೇ ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಸಿಲುಕಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲೂ ಸಹ ವಿಶೇಷ ಪೂಜೆ ಮಾಡಿಸಿದರು.

ಮೈಸೂರು, (ಮೇ.14): ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಟೆಂಪಲ್ ರನ್ ನಡೆಸಿದ್ದಾರೆ. ಇಂದು (ಮೇ 14) ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ದೇವೇಗೌಡ್ರ ನಿವಾಸಕ್ಕೆ ಆಗಮಿಸಿದ ರೇವಣ್ಣ ಮನೆಯಲ್ಲಿ ಪೂಜೆ ಮಾಡಿದರು. ಬಳಿಕ ಬಸವನಗುರಿಯಲ್ಲಿರುವ ಆಂಜನೇಯಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತದನಂತರ ಬನಶಂಕರಿಯ ತಮ್ಮ ನಿವಾಸಕ್ಕೆ ಆಗಮಿಸಿ ಅಲ್ಲಿಗೂ ಸಹ ದೇವರ ಪ್ರಾರ್ಥನೆ ಮಾಡಿದರು. ಬಳಿಕ ಅಲ್ಲಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡಿನ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇನ್ನು ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಸಿಲುಕಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲೂ ಸಹ ವಿಶೇಷ ಪೂಜೆ ಮಾಡಿಸಿದರು. ಕುಟುಂಬದ ಪ್ರತಿಯೊಬ್ಬರ ಹೆಸರು ಹಾಗೂ ನಕ್ಷತ್ರ ಹೇಳಿ ಅರ್ಚನೆ ಮಾಡಿಸಿದರು. ಬಳಿಕ ದೇವಾಲಯದಲ್ಲಿ ಸುಮಾರು ಹತ್ತು ನಿಮಿಷಗಳ ಕಾಲ ಏಕಾಂಗಿಯಾಗಿ ಕುಳಿತು ದೇವಿಗೆ ಪ್ರಾರ್ಥನೆ ಮಾಡಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More