ಧರ್ಮಸ್ಥಳ ಸ್ವಾಮಿ ಮಂಜುನಾಥನ ರಕ್ಷಿಸಿ: ಪ್ಲೇಕಾರ್ಡ್ ಹಿಡಿದು ವಿಧಾನಸೌಧಕ್ಕೆ ಬಂದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಮಂಜುನಾಥ ಸ್ವಾಮಿ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು. ಅವರು ‘ಮಂಜುನಾಥನನ್ನು ರಕ್ಷಿಸಿ, ಅಪಪ್ರಚಾರಿಗಳನ್ನು ಶಿಕ್ಷಿಸಿ’ ಎಂಬ ಪ್ಲೇಕಾರ್ಡ್ ಹಿಡಿದು ಪ್ರತಿಭಟಿಸಿದರು.
ಬೆಂಗಳೂರು, ಆಗಸ್ಟ್ 18: ಧರ್ಮಸ್ಥಳ ಪ್ರಕರಣದ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್, ‘‘ಸ್ವಾಮಿ ಮಂಜುನಾಥನನ್ನು ರಕ್ಷಿಸಿ ಅಪಪ್ರಚಾರಿಗಳನ್ನು ಶಿಕ್ಷಿಸಿ, ಸತ್ಯಮೇವ ಜಯತೇ’’ ಎಂಬ ಪ್ಲೇಕಾರ್ಡ್ ಹಿಡಿದು ಸದನದೊಳಗೆ ಪ್ರವೇಶಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ತಡೆಯುವಂತೆ ಮತ್ತು ಅಪಪ್ರಚಾರ ಮಾಡುವವರಿಗೆ ಶಿಕ್ಷೆ ವಿಧಿಸುವಂತೆ ಅವರು ಆಗ್ರಹಿಸಿದರು. ಸರ್ಕಾರ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡಿ ಜನರಿಗೆ ಸತ್ಯವನ್ನು ತಿಳಿಸಬೇಕೆಂದು ಅವರು ಒತ್ತಾಯಿಸಿದರು. ಆಡಳಿತ ಪಕ್ಷ ಈ ಪ್ರಕರಣವನ್ನು ರಾಜಕೀಯವಾಗಿ ಬಳಸುತ್ತಿದೆ ಎಂದು ಆರೋಪಿಸಿದ ಅವರು, ಧರ್ಮಸ್ಥಳ ಮಂಜುನಾಥ ಎಲ್ಲ ಜನಾಂಗದವರಿಗೆ ಸೇರಿದವ. ಕ್ಷೇತ್ರದ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ಸಹಿಸಲಾಗುವುದಿಲ್ಲ ಎಂದರು.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
