ಸಿಎಂ, ಡಿಸಿಎಂ ಹೆಸರಿನಲ್ಲಿ JDS ಶಾಸಕನಿಂದ ಮಾದಪ್ಪನಿಗೆ ಪೂಜೆ: ವಿಡಿಯೋ ನೋಡಿ

Edited By:

Updated on: Mar 08, 2026 | 7:15 PM

ಹನೂರು ಜೆಡಿಎಸ್ ಶಾಸಕ ಮಂಜುನಾಥ್ ಅವರು 490 ಕೋಟಿ ರೂಪಾಯಿ ನೀರಾವರಿ ಯೋಜನೆಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶವಕುಮಾರ್​ ಹಾಗೂ ಸಚಿವರ ಹೆಸರಿನಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚಾಮರಾಜನಗರ, ಮಾರ್ಚ್​ 08: ಬಜೆಟ್​ನಲ್ಲಿ ಉಡುತೊರೆ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಗೆ 490 ಕೋಟಿ ರೂ. ನೀರಾವರಿ ಯೋಜನೆಗೆ ಅಸ್ತು ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್​ ಹೆಸರಿನಲ್ಲಿ ಮಾದಪ್ಪನಿಗೆ JDS ಹನೂರು ಶಾಸಕ ಮಂಜುನಾಥ್​​ರಿಂದ ಪೂಜೆ ಸಲ್ಲಿಸಲಾಗಿದೆ. ಉಡುತೊರೆ ಜಲಾಶಯಕ್ಕೆ ನೀರು ತುಂಬಿಸಬೇಕೆಂದು ಒತ್ತಾಯ ಇತ್ತು. 490 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಮಾಡಿಸುವುದಾಗಿ ಬಜೆಟ್​​ನಲ್ಲಿ ಅನುದಾನ ಘೋಷಿಸಲಾಗಿದೆ. ಹಾಗಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರಾದ ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ ಹೆಸರಲ್ಲೂ ಪೂಜೆ ಮಾಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More