HD Revanna goes wild: ಪ್ರಜ್ವಲ್ ಗೆ ಟಿಕೆಟ್ ನೀಡಿದ್ದನ್ನು ರಾಮಸ್ವಾಮಿ ಆಗ ಪ್ರಶ್ನಿಸದೆ ಈಗ್ಯಾಕೆ ಕೇಳುತ್ತಿದ್ದಾರೆ? ಹೆಚ್ ಡಿ ರೇವಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Mar 02, 2023 | 3:01 PM

ಅರಕಲಗೂಡು ಮತ್ತು ಅರಸೀಕೆರೆ ಶಾಸಕರಿಗೆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಬೇಕಿದೆ, ಹಾಗಾಗೇ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಭುಸುಗುಡುತ್ತಾ ರೇವಣ್ಣ ಹೇಳಿದರು.

ಹಾಸನ: ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎಟಿ ರಾಮಸ್ವಾಮಿ (AT Ramaswamy) ಅವರು ಪ್ರಜ್ವಲ್ ರೇವಣ್ಣಗೆ (Prajwal Revanna) ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವುದು ಮೊದಲೇ ನಿಗದಿಯಗಿತ್ತು ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ್ದಕ್ಕೆ ಹೆಚ್ ಡಿ ರೇವಣ್ಣ (HD Revanna) ರೊಚ್ಚಿಗೆದ್ದರು. ಪ್ರಶ್ನೆ ಕೇಳಿದ ಪತ್ರಕರ್ತನನ್ನು ಜೋರುಧ್ವನಿಯ ಮೂಲಕ ಮೆತ್ತಗಾಗಿಸಲು ಪ್ರಯತ್ನಿಸಿದ ರೇವಣ್ಣನವರು, ಅದೇ ಮಾತನ್ನು ರಾಮಸ್ವಾಮಿ ಆಗಲೇ ಹೇಳದೆ ಈಗ್ಯಾಕೆ ಹೇಳುತ್ತಿದ್ದಾರೆ ಎಂದು ಕೋಪದಲ್ಲಿ ಕೇಳಿದರು. ಅರಕಲಗೂಡು ಮತ್ತು ಅರಸೀಕೆರೆ ಶಾಸಕರಿಗೆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಬೇಕಿದೆ, ಹಾಗಾಗೇ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಭುಸುಗುಡುತ್ತಾ ರೇವಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.