Legislative council proceedings: ವಿಧಾನ ಪರಿಷತ್ ನಲ್ಲಿ ಸರವಣ ಮತ್ತು ಸಚಿವ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 13, 2023 | 5:44 PM

ಸರ್ಕಾರವನ್ನು ಪ್ರಶ್ನಿಸುವ ಹಕ್ಕು ವಿರೋಧಪಕ್ಷಕ್ಕಿರುತ್ತದೆ, ಸಚಿವ ಜಮೀರ್ ಅಹ್ಮದ್ ಅವರು ಸದನದಲ್ಲಿ ತಾಳ್ಮೆ ಪ್ರದರ್ಶಿಸಬೇಕು ಎಂದು ಸರವಣ ತಿವಿದರು.

ಬೆಂಗಳೂರು: ವಿಧಾನ ಪರಿಷತ್ ನಲ್ಲಿಂದು ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತಾಡಿದ ಜೆಡಿಎಸ್ ಸದಸ್ಯ ಟಿಎ ಸರವಣ (TA Saravana) ಮತ್ತು ಸಚಿವರಾಗಿರುವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಮತ್ತು ಪ್ರಿಯಾಂಕ್ ಖರ್ಗೆ (Priyank Kharge) ನಡುವೆ ಮಾತಿನ ಚಕಮಕಿ ನಡೆಯಿತು. ಅನ್ನಭಾಗ್ಯ ಯೋಜನೆ ಅಡಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ನೀಡಬೇಕು ಅಂದಾಗ ಖರ್ಗೆ ಮತ್ತು ಜಮೀರ್ ವಾದಕ್ಕಿಳಿದರು. ಸ್ವಲ್ಪ ಸಮಯದವರೆಗೆ ಸದಸ್ಯರ ನಡುವೆ ಅರಚಾಟ ಕಿರುಚಾಟ ನಡೆದಿದ್ದರಿಂದ ಯಾರೇನು ಹೇಳುತ್ತಿದ್ದಾರೆ ಅನ್ನೋದು ಗೊತ್ತಾಗಲ್ಲ. ಉಪ ಸಭಾಪತಿ ಎಂಕೆ ಪ್ರಾಣೇಶ್ ಅವರನ್ನು ಶಾಂತಗೊಳಿಸದ ಬಳಿಕ ಸರವಣ, ವಿರೋಧ ಪಕ್ಷ ಸಂವಿಧಾನದ ಅವಿಭಾಜ್ಯ ಅಂಗ, ಸರ್ಕಾರವನ್ನು ಪ್ರಶ್ನಿಸುವ ಹಕ್ಕು ವಿರೋಧಪಕ್ಷಕ್ಕಿರುತ್ತದೆ, ಸಚಿವ ಜಮೀರ್ ಅಹ್ಮದ್ ಅವರು ಸದನದಲ್ಲಿ ತಾಳ್ಮೆ ಪ್ರದರ್ಶಿಸಬೇಕು ಎಂದು ತಿವಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.