AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆ: ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ

ಪರಿಷತ್ ಚುನಾವಣೆ: ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ

Anil Kalkere
| Edited By: |

Updated on: Jun 17, 2026 | 11:15 AM

Share

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಶಾಸಕರನ್ನು ಜೆಡಿಎಸ್ ಸೆಳೆಯುತ್ತಿದೆ ಎಂಬ ಆರೋಪವನ್ನು ಹೆಚ್.ಡಿ.ಕುಮಾರಸ್ವಾಮಿ ನಿರಾಕರಿಸಿದ್ದಾರೆ. ಜೆಡಿಎಸ್ ಸಣ್ಣ ಪಕ್ಷವಾಗಿದ್ದು, ಕಾಂಗ್ರೆಸ್‌ನಂತೆ ಹಣ, ಜನಬಲ ಹೊಂದಿಲ್ಲ. ತಮ್ಮ ಪಕ್ಷದ ಮತಗಳು ಚದುರಿಹೋಗಬಾರದು ಎಂಬ ಕಾರಣಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಿದ್ದು, ಆತ್ಮಸಾಕ್ಷಿ ಮತ ಹಾಗೂ ಬಿಜೆಪಿ ಬೆಂಬಲ ಯಾಚಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು, ಜೂನ್​​ 17: ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ಪಕ್ಷ ಇಂತಹ ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಅವರ ಕೈಯಲ್ಲಿದೆ. ಮ್ಯಾನ್ ಪವರ್, ಮಸಲ್ ಪವರ್, ಹಣದ ಪವರ್ ಎಲ್ಲಾ ಇಟ್ಕೊಂಡವ್ರೆ. ಅವರ ಮುಂದೆ ನಾವು ಫೈಟ್ ಮಾಡಕ್ಕಾಗುತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ತನ್ನ ಪಕ್ಷದ ಮತಗಳು ಚಲ್ಲಾಪಿಲ್ಲಿ ಆಗಬಾರದು, ಒಟ್ಟಾಗಿರಬೇಕು ಎಂಬ ಉದ್ದೇಶದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಗೆಲ್ಲುವ ಉದ್ದೇಶದಿಂದ ಕುತಂತ್ರದ ಮಾರ್ಗ ಅನುಸರಿಸುವ ಪ್ರಶ್ನೆಯೇ ಇಲ್ಲ. ನಮ್ಮ ಅಭ್ಯರ್ಥಿ ಆತ್ಮಸಾಕ್ಷಿ ಮತವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಸರ್ಪ್ಲಸ್ ಮತಗಳ ಬೆಂಬಲಕ್ಕಾಗಿ ಬಿಜೆಪಿ ನಾಯಕರಿಗೆ ಮನವಿ ಮಾಡಲಾಗಿದೆ. ಇದು ನಮ್ಮ ಮತಗಳನ್ನು ಭದ್ರವಾಗಿ ಇಟ್ಟುಕೊಳ್ಳುವ ಸಲುವಾಗಿ ಮಾಡಿದ ಪ್ರಯತ್ನವಷ್ಟೇ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us