ಬೆಂಗಳೂರು ಪ್ರವೇಶಕ್ಕೂ ಮುನ್ನ ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ

Edited By:

Updated on: Aug 10, 2026 | 5:18 PM

ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮುನ್ನವೇ ಪೊಲೀಸರು ತಡೆದಿದ್ದಾರೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿದ್ದ ಈ ಪಾದಯಾತ್ರೆಯನ್ನು ತಡೆದ ಕಾರಣ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಾಗ್ವಾದ, ತಳ್ಳಾಟ-ನೂಕಾಟಗಳು ನಡೆದಿವೆ. ಈ ವೇಳೆ ಎಸ್ಪಿ ಕೈ ಬೆರಳಿಗೂ ಗಾಯವಾದ ಪ್ರಸಂಗ ನಡೆದಿದೆ.

ರಾಮನಗರ, ಆಗಸ್ಟ್​​ 10: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮುನ್ನ ಪೊಲೀಸರು ತಡೆದ ಪರಿಣಾಮ ಭಾರಿ ಹೈಡ್ರಾಮಾವೇ ನಡೆದಿದೆ. ಹೋರಾಟಗಾರರು ಹೆಜ್ಜಾಲ ಬಳಿ ಹಾಕಿದ್ದ ಬ್ಯಾರಿಕೇಡ್ ತಳ್ಳಿ ಬಂದಿದ್ದ ಕಾರಣ ಕ್ರೈಸ್ಟ್ ಕಾಲೇಜು ಬಳಿ ರಸ್ತೆಗೆ ಅಡ್ಡಲಾಗಿ ಬಸ್ ನಿಲ್ಲಿಸಿ ಪಾದಯಾತ್ರೆಯನ್ನು ಪೊಲೀಸರು ತಡೆದಿದ್ದಾರೆ. ಹೀಗಾಗಿ ರೊಚ್ಚಿಗೆದ್ದ JDS ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದು, ಪೊಲೀಸರ ಜೊತೆಗೆ ತೀವ್ರ ವಾಗ್ವಾದವನ್ನೂ ನಡೆಸಿದ್ದಾರೆ. ತಳ್ಳಾಟ ನೂಕಾಟ ವೇಳೆ SP ಶ್ರೀನಿವಾಸ್​ಗೌಡಗೆ ಅವರ ಎಡಗೈ ಬೆರಳಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತೆಯಲ್ಲಿ ಅವರು ಚಿಕಿತ್ಸೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More