Understanding between JDS and BJP? ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹೀನಾಯ ಸೋಲಿಗೆ ಬಿಜೆಪಿಯೇ ಕಾರಣ: ಟಿಎ ಸರವಣ, ಎಮ್ ಎಲ್ ಸಿ
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಪ್ಪಂದವೇರ್ಪುಡುವ ಸಾಧ್ಯತೆಯ ವದಂತಿಗಳು ಹಬ್ಬಿವೆ.
ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ (JDS) ಅನುಭವಿಸಿದ ಸೋಲಿಗೆ ಬಿಜೆಪಿಯೇ ನೇರ ಕಾರಣ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿ ಎ ಸರವಣ (TA Saravana) ದೂರಿದರು. ಬೆಂಗಳೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸರವಣ, ಮುಂಬರುವ ಯಾವುದೇ ಚುನಾವಣೆಯಲ್ಲಿ ಜೆಡಿಎಸ್ ಯಾವ ಪಕ್ಷದೊಂದಿಗೂ ಒಳ ಒಪ್ಪಂದ ಮಾಡಿಕೊಳ್ಳುವುದದಿಲ್ಲ ಎಂದರು. ಪಕ್ಷದ ನಾಯಕರಾದ ಹೆಚ್ ಡಿ ದೇವೇಗೌಡ (HD Devegowda) ಮತ್ತು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಯಾವತ್ತೂ ಒಳಒಪ್ಪಂದ ಮಾಡಿಕೊಂಡವರಲ್ಲ, ಅದೇನಿದ್ದರೂ ಬಹಿರಂಗವಾಗೇ ಮಾಡುತ್ತಾರೆ ಎಂದು ಅವರು ಹೇಳಿದರು. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಪ್ಪಂದವೇರ್ಪುಡುವ ಸಾಧ್ಯತೆಯ ವದಂತಿಗಳು ಹಬ್ಬಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

